ಮಡಿಕೇರಿ, ನ. ೧೨: ವ್ಯಕ್ತಿಯೊರ್ವ ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣದ ಮೂಲಕ ನೀಡಿದ ದೂರಿನ ಮೇರೆಗೆ, ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸಂಬAಧಪಟ್ಟ ವ್ಯಕ್ತಿ ಹಾಗೂ ಬೈಕ್ ಅನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಂಡಿದ್ದಾರೆ.

೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ವಿಚಾರಣೆ ನಡೆಸಿದ ಕುಶಾಲನಗರದ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆರೋಪಿತನಿಗೆ ರೂ. ೧೦ ಸಾವಿರ ದಂಡ ವಿಧಿಸಿದೆ. ಸಂಚಾರಿ ನಿಯಮಗಳನ್ನು ಪಾಲಿಸಿ ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ.