ವೀರಾಜಪೇಟೆ, ನ. ೧೨: ವೀರಾಜಪೇಟೆಯ ಬೇಟೋಳಿ ಗ್ರಾಮದ ರಾಮನಗರದವರಾದ ಭರತನಾಟ್ಯ ಕಲಾವಿದೆ ಲಾವಣ್ಯ ಬೋರ್ಕರ್ ಅವರಿಗೆ ಸುಳ್ಯದ ಕೆವಿಜಿ ತಾಂತ್ರಿಕ ಮಹಾವಿದ್ಯಾಲಯವು ಲಾವಣ್ಯ ಅವರ ಭರತನಾಟ್ಯ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಈ ವರ್ಷದ ಕೆವಿಜಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಮಹಾವಿದ್ಯಾಲಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಲಾವಣ್ಯ ಅವರಿಗೆ ಪ್ರತಿಷ್ಠಿತ ಕೆವಿಜಿ ರಾಜ್ಯೋತ್ಸವ ಪ್ರಶಸ್ತಿಯನ್ನು ವಿದ್ಯಾಸಂಸ್ಥೆಯ ವತಿಯಿಂದ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ವಿದ್ಯಾಸಂಸ್ಥೆಯ ಮುಖ್ಯಸ್ಥರು, ಪ್ರಾಂಶುಪಾಲರು, ಗಣ್ಯರು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಲಾವಣ್ಯ ಬೋರ್ಕರ್ ಅವರು ವೀರಾಜಪೇಟೆಯ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ಹಳೆಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಸುಳ್ಯದ ಕೆವಿಜಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದ್ವಿತೀಯ ವರ್ಷದ ಎಂಬಿಎ ಸ್ನಾತಕೋತ್ತರ ಪದವಿ ತರಗತಿಯಲ್ಲಿ ವ್ಯಾಸಂಗವನ್ನು ಮಾಡುತ್ತಿದ್ದಾರೆ. ಜಿಲ್ಲಾ, ರಾಜ್ಯ ಹಾಗೂ ರಾಷ್ಟçಮಟ್ಟದ ಹಲವಾರು ಪ್ರಶಸ್ತಿ ಪುರಸ್ಕಾರವನ್ನು ಪಡೆದಿರುವ ಪ್ರತಿಭೆ ಲಾವಣ್ಯ, ವೀರಾಜಪೇಟೆ ಬೇಟೋಳಿ ಗ್ರಾಮದ ನಾಟಿ ವೈದ್ಯರಾದ ನಟರಾಜ್ ಬೋರ್ಕರ್ ಹಾಗೂ ಸುನಂದ ಬೋರ್ಕರ್ ಅವರ ಪುತ್ರಿ.