ನಾಪೋಕ್ಲು, ನ. ೧೨: ಶ್ರೀ ಜೇ.ಪಿ ನಾರಾಯಣಸ್ವಾಮಿ ಪ್ರತಿಷ್ಠಾನ (ರಿ.), ಬೆಂಗಳೂರು ವತಿಯಿಂದ ೨೦೨೬-೨೭ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಬಿ.ಇಡಿ (ಃ.ಇಜ) ವ್ಯಾಸಂಗ ಮಾಡುತ್ತಿರುವ ಈಡಿಗ, ಬಿಲ್ಲವ ಸಮುದಾಯ ಸೇರಿದಂತೆ ಪ್ರತಿಷ್ಠಾನದ ವ್ಯಾಪ್ತಿಗೆ ಒಳಪಡುವ ೨೫ ಉಪಜಾತಿಗಳ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ಹಾಗೂ ಆರ್ಥಿಕವಾಗಿ ಹಿಂದುಳಿದ ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ನೆರವಾಗುವ ಉದ್ದೇಶದಿಂದ ಪ್ರತಿಷ್ಠಾನವು ಈ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೊಳಿಸಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು:

೧. ೨೦೨೬-೨೭ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

೨. ೨೦೨೫-೨೬ನೇ ಸಾಲಿನ ಹಿಂದಿನ ಪರೀಕ್ಷೆಯಲ್ಲಿ ಕನಿಷ್ಟ ಶೇ.೬೫ರಷ್ಟು ಅಂಕಗಳನ್ನು ಪಡೆದಿರಬೇಕು. ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿದ್ಯಾರ್ಥಿಗಳು ಕನಿಷ್ಟ ಶೇ.೭೫ರಷ್ಟು ಅಂಕಗಳನ್ನು ಪಡೆದಿರಬೇಕು.

೩. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು ಹಾಗೂ ಅವರ ಕುಟುಂಬವು ಬಿಪಿಎಲ್ ಪಡಿತರ ಹೊಂದಿರಬೇಕು. ಸಂಪೂರ್ಣ ಮಾರ್ಗಸೂಚಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ವಿದ್ಯಾರ್ಥಿಗಳು ಪ್ರತಿಷ್ಠಾನದ ಅಧಿಕೃತ ವೆಬ್‌ಸೈಟ್ ತಿತಿತಿ.ರಿಠಿಟಿಠಿ.oಡಿg.iಟಿ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ವಿದ್ಯಾರ್ಥಿಗಳು ಅರ್ಜಿಯಲ್ಲಿ ಯಾವುದೇ ತಪ್ಪು ಮಾಹಿತಿ ನೀಡದೆ, ಅಗತ್ಯ ದಾಖಲೆಗಳನ್ನು ಸರಿಯಾಗಿ ಲಗತ್ತಿಸಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಸಂಬAಧಪಟ್ಟ ಸಮಿತಿಗಳು ಪರಿಶೀಲಿಸಿದ ನಂತರ ಅರ್ಹ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವಿದ್ಯಾರ್ಥಿ ವೇತನದ ಮೊತ್ತವನ್ನು ನೇರವಾಗಿ ಜಮೆ ಮಾಡಲಾಗುತ್ತದೆ.

ಆದ್ದರಿಂದ ಅರ್ಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ನಿಗದಿತ ದಿನಾಂಕದೊಳಗೆ ಕೊಡಗು ಈಡಿಗ, ಬಿಲ್ಲವ ಸೇರಿದಂತೆ ಪ್ರತಿಷ್ಠಾನದ ವ್ಯಾಪ್ತಿಗೆ ಒಳಪಡುವ ೨೫ ಉಪಜಾತಿಗಳ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಶ್ರೀ ಜೇ.ಪಿ. ನಾರಾಯಣಸ್ವಾಮಿ ಪ್ರತಿಷ್ಠಾನ (ರಿ.), ಬೆಂಗಳೂರು ಪರವಾಗಿ ಕೊಡಗು ಜಿಲ್ಲಾ ಸಂಚಾಲಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು: ಅಧಿಕೃತ ವೆಬ್‌ಸೈಟ್: ತಿತಿತಿ.ರಿಠಿಟಿಠಿ.oಡಿg.iಟಿ ಸಂಪರ್ಕಿಸಲು ಕೋರಲಾಗಿದೆ.