ಸುಂಟಿಕೊಪ್ಪ, ನ. ೧೩ ; ಸುಂಟಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿವಂಗತ ಬಿ.ಜಿ. ರಘುನಾಥ್ ನಾಯ್ಕ ಸ್ಮಾರಕ ದÀತ್ತಿನಿಧಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಬಾಸ್ಟಿನ್ ಸಾಹಿತಿ ರಘುನಾಥ್ ನಾಯ್ಕ ಅವರ ಸಾಹಿತ್ಯ ಅಭಿಮಾನ ಮತ್ತು ಸಮಾಜ ಸೇವೆಯ ಕುರಿತು ಮಾತನಾಡಿದರು. ವೀರಾಜಪೇಟೆ ತಾಲೂಕು ಕಸಾಪ ಅಧ್ಯಕ್ಷರಾಗಿ ಅವರು ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.
ಉದಯೋನ್ಮುಖ ಸಾಹಿತಿ ಮತ್ತು ಶಾಲಾ ಶಿಕ್ಷಕರಾಗಿರುವ ಸತೀಶ್ ಕಾಜೂರು ಅವರು ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ಮಾತನಾಡಿದರು.
ವೇದಿಕೆಯಲ್ಲಿ ಮುಖ್ಯೋಪಾಧ್ಯಾಯ ಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ನಂದಕುಮಾರ್, ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಲೀಲಾ ಮೇದಪ್ಪ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಾ ಹೆಗ್ಡೆ, ಶಿಕ್ಷಕರಾದ ಪ್ರಕಾಶ್, ಚಿತ್ರಾ, ಉಷಾ, ಅನುಷಾ ಶಾಲಾಭಿವೃದ್ಧಿ ಸಮಿತಿಯ ಸದಸ್ಯ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.