ಚೆಯ್ಯಂಡಾಣೆ, ನ. ೧೩: ನಾಪೋಕ್ಲು ಕ್ಲಸ್ಟರ್ ಮಟ್ಟದ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿಕ್ಷಕರಿಗೆ ಕ್ಲಸ್ಟರ್ ಮಟ್ಟದ ಎಲ್ಲಾ ಶಾಲೆಗಳ ಶಿಕ್ಷಕರ ವತಿಯಿಂದ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು.
ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಕನ್ನಡ ಪ್ರಾಥಮಿಕ ವಿಭಾಗದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಡಿಯಾಣಿ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆಸಲ್ಲಿಸಿ ನಿವೃತ್ತರಾದ ಎಂ.ಬಿ.ಭಾರತಿ, ಧಮೇಂದ್ರ ಕೆ.ಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡಿಯಾಣಿ, ಲೋಕೇಶ್ ಎ. ಎಸ್. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಮ್ಮೆಮಾಡು, ಪ್ರಕಾಶ್ ಬಿ.ಆರ್. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡಿಯಾಣಿ ಇವರುಗಳನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ನಾಪೋಕ್ಲು ಕ್ಲಸ್ಟರ್ ನ ಸಿಆರ್ಪಿಯವರಾದ ವೀಣಾ, ಬಿಆರ್ಪಿ ಮಂಜುಳಾ ಚಿತ್ರಾಪುರ ಹಾಗೂ ಕ್ಲಸ್ಟರ್ ಮಟ್ಟದ ಶಾಲೆಗಳ ಶಿಕ್ಷಕರು ಹಾಜರಿದ್ದರು.