ವೀರಾಜಪೇಟೆ: ಸ್ಥಳೀಯ ಶಿವಕೇರಿಯ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಲಕ್ಷಿö್ಮ ಪೂಜೆ ಶ್ರದ್ಧಾಭಕ್ತಿ ಯಿಂದ ನೆರವೇರಿತು.

ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನ ಗಳೊಂದಿಗೆ ಧನಲಕ್ಷಿö್ಮ ಪೂಜಾ ಕಾರ್ಯಕ್ರಮ ಗಳನ್ನು ನಡೆಸಲಾಯಿತು. ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ ನೆರವೇರಿಸಿ, ಮಹಾ ಮಂಗಳಾರತಿ ಬೆಳಗಿ ಪ್ರಾರ್ಥಿಸಲಾಯಿತು. ನಾಡಿನ ಸುಭಿಕ್ಷೆ, ಭಕ್ತರ ಕಲ್ಯಾಣ ಹಾಗೂ ಸಮೃದ್ಧಿಗಾಗಿ ಈ ಸಂದರ್ಭದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಪೂಜಾ ಕೈಂಕಯ ಗಳ ನಂತರ ಆಗಮಿಸಿದ್ದ ಸಮಸ್ತ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಈ ಶುಭ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿ ಗಳು ಹಾಗೂ ಶಿವಕೇರಿ ಭಾಗದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.