ಮಡಿಕೇರಿ, ನ. ೧೩ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ೧೪ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೬-೨೭ನೇ ಸಾಲಿನಲ್ಲಿ ಸೇವಾಒನ್ ಆನ್‌ಲೈನ್ ತಂತ್ರಾAಶದಡಿ ಅಳವಡಿಸಲಾಗಿದೆ.

ಈ ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಲಾಗಿದ್ದು, ವಿಕಲಚೇತನ ಫಲಾನುಭವಿಗಳು ಆನ್‌ಲೈನ್ ಮೂಲಕ (hಣಣಠಿs://sevಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ) ಪೋರ್ಟ್ಲ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್, ೧೫ ರವರೆಗೆ ಅವಧಿ ವಿಸ್ತರಿಸಲಾಗಿದೆ. ಜಿಲ್ಲೆಯ ವಿಶೇಷಚೇತನರು ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

ಯೋಜನೆಗಳ ವಿವರ: ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿದಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್‌ಚೇರ್, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆöÊಲ್ ಕಿಟ್ ಯೋಜನೆ ಹಾಗೂ ಸಾಧನ ಸಲಕರಣೆ ಯೋಜನೆ.

ಹೆಚ್ಚಿನ ಮಾಹಿತಿಗೆ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿಆರ್‌ಡಬ್ಲುö್ಯ ಹಾಗೂ ತಾಲೂಕು ಪಂಚಾಯತ್‌ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‌ಡಬ್ಲುö್ಯಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಹರೀಶ್ ಟಿ.ಆರ್. ಮೊ.ಸಂ.-೮೮೬೧೪೨೮೯೩೧, ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಪ್ರಥನ್ ಕುಮಾರ್ ಸಿ.ಬಿ ಮೊ.ಸಂ.೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲೂಕಿನ ರಾಜೇಶ್ ಮೊ.ಸಂ.೮೦೭೩೧೯೨೯೧೪ ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.೦೮೨೭೨-೨೯೫೮೨೯ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.