ಶ್ರೀಮಂಗಲ, ನ. ೧೩: ಪೊನ್ನಂಪೇಟೆ ತಾಲೂಕು ನಿಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೫ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಮುಖಂಡರು, ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.

ವೀರಾಜಪೇಟೆ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಬೆಳ್ಳೂರು ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಸ್ವಾಗತಿಸಿದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ನಿಟ್ಟೂರು ವಲಯ ಅಧ್ಯಕ್ಷ ಪೋರಂಗಡ ಪವನ್ ಚಿಟ್ಟಿಯಪ್ಪ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ಹುದಿಕೇರಿ ವಲಯ ಅಧ್ಯಕ್ಷ ಚಂಗುಲAಡ ಸೂರಜ್, ಟಿ. ಶೆಟ್ಟಿಗೇರಿ ವಲಯ ಅಧ್ಯಕ್ಷರು ತೀತಿರ ಪ್ರಭು ಸುಬ್ಬಯ್ಯ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಂ. ಬಾಲಕೃಷ್ಣ, ಮುಕ್ಕಾಟೀರ ಸಂದೀಪ್, ಕುಟ್ಟ ವಲಯ ಅಧ್ಯಕ್ಷ ಹೆಚ್.ವೈ. ರಾಮಕೃಷ್ಣ, ಪಕ್ಷದ ಮುಖಂಡರಾದ ಅಪ್ಪಚಂಗಡ ಮೋಟಯ್ಯ, ಬುಟ್ಟಿಯಂಡ ತಂಬಿ ನಾಣಯ್ಯ, ಚೊಟ್ಟೆಯಂಡಮಾಡ ಉದಯ, ತೀತಿರ ಚೋಂದಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಚಂಗುಲAಡ ರೀಕ್ಷಿತ್, ಇಟ್ಟಿರ ಭವಿನ್ ಕುಶಾಲಪ್ಪ, ಕಾಯಪಂಡ ಕಾವೇರಪ್ಪ, ಅಣ್ಣಳಮಾಡ ಗಿರೀಶ್, ಅಜ್ಜಿಕುಟ್ಟಿರ ಗಿರೀಶ್ ಫಾರ್ದಿನ್, ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.