ಮಡಿಕೇರಿ, ನ.೧೩: ಹದಗೆಟ್ಟಿರುವ ಮಡಿಕೇರಿ-ಗಾಳಿಬೀಡು ಮುಖ್ಯರಸ್ತೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿ, ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದಿರುವುದನ್ನು ಖಂಡಿಸಿ ಗಾಳಿಬೀಡು ಗ್ರಾಮಸ್ಥರು ತಾ.೧೪ರಂದು (ಇಂದು) ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಸಲು ನಿರ್ಧರಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮಸ್ಥ ದಿಶಾಂತ್, ಗಾಳಿಬೀಡು ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು, ೨೦೨೫ರ ನ.೧೪ರಂದು ಭೂಮಿಪೂಜೆ ನೆರವೇರಿಸಲಾಗಿತ್ತು. ಆದರೆ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಕಾಮಗಾರಿ ವಿಳಂಬಕ್ಕೆ ಕಾರಣವೇನು ಎಂಬುದನ್ನು ಸಂಬAಧಪಟ್ಟ ಅಧಿಕಾರಿಗಳು ಸ್ಪಷ್ಟಪಡಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಸ್ತೆಯ ದುಸ್ಥಿತಿಯಿಂದಾಗಿ ಸಾರ್ವಜನಿಕರು ಪ್ರತಿನಿತ್ಯ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ರಸ್ತೆಯಲ್ಲಿ ಹಲವು ರೆಸಾರ್ಟ್ಗಳಿದ್ದು, ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಪ್ರಮುಖ ಸಂಪರ್ಕ ರಸ್ತೆಯಾಗಿದ್ದರೂ ಅಭಿವೃದ್ಧಿ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದರು.
ಕಾಮಗಾರಿ ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರು ಹಾಗೂ ಸಂಬAಧಪಟ್ಟ ಇಂಜಿನಿಯರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಅವರು, ತಾ. ೧೪ರಂದು ಬೆಳಿಗ್ಗೆ ೮ ಗಂಟೆಯಿAದ ಜಿಲ್ಲಾ ಪಂಚಾಯಿತಿ ಕಚೇರಿ ಜಂಕ್ಷನ್ನಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಸಂಬAಧಪಟ್ಟ ಅಧಿಕಾರಿಗಳು ಸೂಕ್ತ ಉತ್ತರ ನೀಡುವುದರೊಂದಿಗೆ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ಉಮೇಶ್ ಗುಡ್ಡೆಮನೆ, ಸಂತೋಷ್ ಪೂಜಾರಿ, ನಿತಿನ್ ಯಾಲದಾಳು, ಪುಷ್ಪರಾಜು ಹಾಗೂ ಶರತ್ ಯಾಲದಾಳು ಉಪಸ್ಥಿತರಿದ್ದರು.