ಸಿದ್ದಾಪುರ, ನ. ೧೩: ಸಿದ್ದಾಪುರ ಗ್ರಾಮ ಪಂಚಾಯಿತಿ ಹಾಗೂ ಸ್ವಚ್ಛ ಸಿದ್ದಾಪುರ ಸಮಿತಿಯ ನೇತೃತ್ವದಲ್ಲಿ, ವಿವಿಧ ಸಂಘ - ಸಂಸ್ಥೆಗಳ ಮತ್ತು ವಿವಿಧ ಶಾಲಾ - ಕಾಲೇಜುಗಳ ಸಹಯೋಗದಲ್ಲಿ ತಾ. ೧೭ ರಂದು ಬೆಳಿಗ್ಗೆ ೧೦ ಗಂಟೆಗೆ ಸ್ವಚ್ಛತಾ ಅಭಿಯಾನವನ್ನು ಸಿದ್ದಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮಕ್ಕೆ ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ-ಸAಸ್ಥೆಯ ಪದಾಧಿಕಾರಿಗಳು ಮತ್ತು ಸ್ವಚ್ಛ ಸಿದ್ದಾಪುರ ಸಮಿತಿಯ ಪದಾಧಿಕಾರಿಗಳು ಆಗಮಿಸಲಿದ್ದಾರೆ.
ಸಿದ್ದಾಪುರವನ್ನು ಸ್ವಚ್ಛ ಸುಂದರ ಹಾಗೂ ಆರೋಗ್ಯಕರವಾಗಿಡಲು ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ಜಾಗೃತಿ ಮೂಡಿಸಲು ಈ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ಸಿದ್ದಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ತಿಳಿಸಿದ್ದಾರೆ. ಸ್ವಚ್ಛತಾ ಅಭಿಯಾನದ ಅಂಗವಾಗಿ ವಿವಿಧ ಸಂಘ - ಸಂಸ್ಥೆಗಳು ಹಾಗೂ ಶಾಲಾ - ಕಾಲೇಜುಗಳ ಸಹಯೋಗದಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಸಿದ್ದಾಪುರದ ಶ್ರೀ ಅಯ್ಯಪ್ಪ ದೇವಾಲಯದ ಸಮೀಪದಿಂದ ಸ್ವಚ್ಛತಾ ಅಭಿಯಾನವನ್ನು ಪ್ರಾರಂಭಿಸಲಾಗುವುದೆAದು ತಿಳಿಸಿದ್ದಾರೆ.