ಮಡಿಕೇರಿ, ನ. ೧೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಅಂತರರಾಷ್ಟಿçÃಯ ಕಾರ್ಮಿಕ ಸಂಸ್ಥೆ(ಐಎಲ್ಒ), ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ-ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಕ್ಷೇತ್ರದಲ್ಲಿ ಬಾಲಕಾರ್ಮಿಕರ ಸ್ಥಿತಿ, ವಲಸೆ ಕುಟುಂಬಗಳ ಸಮಸ್ಯೆಗಳು ಹಾಗೂ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ತಿದ್ದುಪಡಿ ಕಾಯ್ದೆ ೨೦೧೬ ರ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವು ತಾ.೧೭ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷಿö್ಮ ರಾಯಕೋಡ, ಉಪ ವಿಭಾಗಾಧಿಕಾರಿ ಬಸನಗೌಡ ಕೋಟೂರು, ಅಂತರರಾಷ್ಟಿçÃಯ ಕಾರ್ಮಿಕ ಸಂಸ್ಥೆಯ ಚೈಲ್ಡ್ ಲೇಬರ್ ಪ್ಲಾಟ್ ಫಾರಂನ ರಾಷ್ಟಿçÃಯ ಯೋಜನಾ ಸಂಯೋಜಕರಾದ ರಂಜಿತ್ ಪ್ರಕಾಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಸಿ.ಟಿ.ಜೋಸೆಫ್, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕರಾದ ಡಾ.ಬಿ.ಎಸ್.ಚಂದ್ರಶೇಖರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಕೆ.ಯೋಗೇಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ ಡಿ.ಆರ್., ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾದ ಎಚ್.ಶಶಿಧರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಚ್.ಸಿ.ಭಾಗೀರಥಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಅಂಬಿಕಾ ವಿ. ಇತರರು ಪಾಲ್ಗೊಳ್ಳಲಿದ್ದಾರೆ.