ಚೆಯ್ಯಂಡಾಣೆ, ನ. ೧೪: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರ ಸಾಕುನಾಯಿಗಳು ಮತ್ತು ಬೆಕ್ಕುಗಳಿಗೆ ಉಚಿತ ರೇಬಿಸ್ ಲಸಿಕೆ ಹಾಕುವ ಕಾರ್ಯಕ್ರಮವನ್ನು ತಾ. ೧೭ರಂದು ಚೆಯ್ಯಂಡಾಣೆ ಪಶು ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಮೂರು ತಿಂಗಳ ಮೇಲ್ಪಟ್ಟ ನಾಯಿ ಮತ್ತು ಬೆಕ್ಕುಗಳಿಗೆ ಲಸಿಕೆ ಹಾಕಲಾಗುವುದು.

ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ತಮ್ಮ ಸಾಕುಪ್ರಾಣಿಗಳನ್ನು ಕರೆತಂದು ಉಚಿತ ರೇಬಿಸ್ ಲಸಿಕೆ ಹಾಕಿಸಿಕೊಳ್ಳುವಂತೆ ಮೂರ್ನಾಡು ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಶಿಲ್ಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.