ಮಡಿಕೇರಿ, ನ. ೧೪: ೨೭ನೇ ಕೊಡವ ಕೌಟಂಬಿಕ ಹಾಕಿ ಪಂದ್ಯಾವಳಿಯ ಆತಿಥ್ಯವನ್ನು ಅಜ್ಜಿಕುಟ್ಟಿರ ಕುಟುಂಬ ವಹಿಸಿಕೊಂಡಿದ್ದು, ಲಾಂಛನ ಬಿಡುಗಡೆ ಕಾರ್ಯಕ್ರಮವನ್ನು ತಾ.೨೨ ರಂದು ಸಂಜೆ ೬ ಗಂಟೆಗೆ ಬೆಂಗಳೂರಿನ ಹಕ್ಕಿತಿಮ್ಮನಹಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಹಾಕಿ ಸಂಘದಲ್ಲಿ ಹಮ್ಮಿಕೊಳ್ಳಲಾಗಿದೆ. ಲಾಂಛನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಇಂಧನ ಹಾಗೂ ಪ್ರವಾಸೋಧ್ಯಮ ಸಚಿವ ಕೆ.ಜೆ. ಜಾರ್ಜ್, ಕೃಷಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ, ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ, ಎ.ಎಸ್. ಬೋಪಣ್ಣ, ಸಂಸದ ಯದುವೀರ್ ಒಡೆಯರ್ ಹಾಗೂ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಅರುಣ್ ಮಾಚಯ್ಯ, ಅಜ್ಜಿಕುಟ್ಟಿರ ಕುಟುಂಬದ ಕೌಟುಂಬಿಕ ಹಾಕಿ ಪಂದ್ಯಾವಳಿಯ ಅಧ್ಯಕ್ಷ ನರೇನ್ ಕಾರಿಯಪ್ಪ, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಬೋಪಣ್ಣ, ಅಜ್ಜಿಕುಟ್ಟಿರ ಕುಟುಂಬದ ಅಧ್ಯಕ್ಷ ಅಜ್ಜಿಕುಟ್ಟಿರ ಚಂಗಪ್ಪ (ಸಜನ್) ಹಾಗೂ ಇತರ ಗಣ್ಯರು ಆಗಮಿಸಲಿದ್ದಾರೆ.

ಈ ಸಂದರ್ಭ ಹಾಕಿ ಕೇತ್ರದಲ್ಲಿ ರಾಷ್ಟಿçÃಯ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಗುವುದು ಎಂದು ವೀರಾಜಪೇಟೆ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ತಿಳಿಸಿದ್ದಾರೆ.