ಮಡಿಕೇರಿ, ನ.೧೪ : ಕೊಡಗು ಗೌಡ ಯುವ ವೇದಿಕೆ ವತಿಯಿಂದ ೪ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್ (ಜಿಪಿಎಲ್) ಲೆದರ್ ಬಾಲ್ ಟಿ-೧೦ ಕ್ರಿಕೆಟ್ ಪಂದ್ಯಾವಳಿ ಡಿ.೨೧ರಿಂದ ೨೭ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಕ್ಕಲಿಗ ಗೌಡ ಜನಾಂಗದವರಿಗಾಗಿ ಆಯೋಜಿಸಲಾಗುತ್ತಿರುವ ಈ ಪಂದ್ಯಾವಳಿಯಲ್ಲಿ ಒಟ್ಟು ೮ ಫ್ರಾಂಚೈಸಿಗಳು ಪಾಲ್ಗೊಳ್ಳಲಿವೆ ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದರು.
ಮಡಿಕೇರಿಯಲ್ಲಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಕೊಡಗು ಗೌಡ ಯುವ ವೇದಿಕೆ ಜನಾಂಗದ ಯುವಜನರಿಗೆ ಕ್ರೀಡಾ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿವಿಧ ಕ್ರೀಡಾಕೂಟ ಹಾಗೂ ಕಾರ್ಯಕ್ರಮಗಳನ್ನು ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಆಯೋಜಿಸಿಕೊಂಡು ಬರುತ್ತಿದೆ. ೨೦೨೩ರಲ್ಲಿ ಮೊದಲ ಬಾರಿಗೆ ಮನರಂಜನಾ ಕ್ರಿಕೆಟ್ನಿಂದ ವೃತ್ತಿಪರ ಕ್ರಿಕೆಟ್ನತ್ತ ಯುವ ಪ್ರತಿಭೆಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಲೆದರ್ ಬಾಲ್ ಕ್ರಿಕೆಟ್ ಪರಿಚಯಿಸಲಾಯಿತು. ಕಳೆದ ಮೂರು ವರ್ಷಗಳಿಂದ ಪಂದ್ಯಾವಳಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, ಇದೀಗ ಗ್ರಾಮೀಣ ಪ್ರದೇಶಗಳಲ್ಲಿಯೂ ಲೆದರ್ ಬಾಲ್ ಕ್ರಿಕೆಟ್ಗೆ ಅಗತ್ಯ ಮೂಲಸೌಕರ್ಯಗಳು ರೂಪುಗೊಳ್ಳುತ್ತಿವೆ ಎಂದರು.
೨೦೨೬ರ ಸೀಸನ್-೪ರಲ್ಲಿ ಕಳೆದ ಬಾರಿಯ ದಿ ಎಲೈಟ್, ಜಿ ಕಿಂಗ್ ಸಿದ್ದಲಿಂಗಪುರ, ಕೂರ್ಗ್ ಹಾಕ್ಸ್ ಮಡಿಕೇರಿ, ಪ್ಲಾಂಟರ್ಸ್ ಕ್ಲಬ್ ಬಿಳಿಗೇರಿ, ಕೊಡಗು ಜಿಲ್ಲಾ ಒಕ್ಕಲಿಗರ ಯುವ ವೇದಿಕೆ, ಪುತ್ತೂರಿನ ಯುವ ತಂಡ, ಮರಗೋಡು ಹಾಗೂ ಕುಶಾಲನಗರ ತಂಡಗಳು ಸೇರಿದಂತೆ ಒಟ್ಟು ಎಂಟು ಫ್ರಾಂಚೈಸಿಗಳು ಭಾಗವಹಿಸಲಿವೆ. ನ.೨೭ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪಂದ್ಯಾವಳಿಯ ವಿಜೇತ ತಂಡಕ್ಕೆ ಒಂದು ಲಕ್ಷ ರೂ. ನಗದು ಹಾಗೂ ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ೬೦ ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಇದರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭ ೨೦೨೩ರಲ್ಲಿ ಬಿಡುಗಡೆ ಮಾಡಿದ್ದ ಗೌಡ ಸಂಸ್ಕೃತಿ ಮತ್ತು ಬಲಿದಾನದ ಪ್ರತೀಕವಾದ ಆಕರ್ಷಕ ಟ್ರೋಫಿ ಸೇರಿದಂತೆ ಹಲವು ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವುದು. ಈ ಬಾರಿ ಕಳೆದ ಮೂರು ವರ್ಷಗಳಿಗಿಂತಲೂ ವಿಜೃಂಭಣೆಯಿAದ ಪಂದ್ಯಾವಳಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಇದೇ ಸಂದರ್ಭ ಒಕ್ಕಲಿಗ ಗೌಡ ಮಹಿಳೆಯರಿಗಾಗಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ನಡೆಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.
ಈಗಾಗಲೇ ಜಿಪಿಎಲ್ ಮೂಲಕ ಹಲವು ಕ್ರೀಡಾ ಪ್ರತಿಭೆಗಳು ಹೊರಹೊಮ್ಮಿದ್ದು, ಗೌಡ ಜನಾಂಗದ ಪುರುಷ ಹಾಗೂ ಮಹಿಳಾ ಆಟಗಾರರು ರಾಜ್ಯಮಟ್ಟದ ಕ್ರಿಕೆಟ್ ತಂಡಗಳಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ರಿಷಿತ್ ಮಾದಯ್ಯ ತಿಳಿಸಿದರು.
೨೦೨೬ರ ಮೇ ತಿಂಗಳಿನಲ್ಲಿ ಯಶಸ್ವಿಯಾಗಿ ನಡೆಸಲಾಗಿದ್ದ ಗೌಡ ಕುಟುಂಬವಾರು ಮಿನಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು ೨೦೨೭ರಲ್ಲಿ ಏಪ್ರಿಲ್ ೧೬ರಿಂದ ಮೇ ೨ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿಯೂ ರಿಂಕ್ ಹಾಕಿ ಸ್ಪರ್ಧೆ ಇರಲಿದೆ ಎಂದರು.
ಸರಕಾರದ ಅನುದಾನಕ್ಕೆ ಆಗ್ರಹ
ಕೊಡಗು ಗೌಡ ಯುವ ವೇದಿಕೆ ಕಳೆದ ೨೫ ವರ್ಷಗಳಿಂದ ಗೌಡ ಜನಾಂಗದ ಕ್ರೀಡಾಕೂಟಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಸರಕಾರದಿಂದ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಈ ಬಾರಿಯಾದರೂ ಸರಕಾರ ಜನಾಂಗದ ಕ್ರೀಡೆ ಹಾಗೂ ಸಂಸ್ಕೃತಿಯ ಅಭಿವೃದ್ಧಿಗೆ ಸಹಕರಿಸಬೇಕು. ಮಡಿಕೇರಿ ಮತ್ತು ವೀರಾಜಪೇಟೆ ಕ್ಷೇತ್ರದ ಶಾಸಕರು ಈ ಬಗ್ಗೆ ಆಸಕ್ತಿ ವಹಿಸಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿವರ್ಷ ಶಾಸಕರಿಂದ ಅನುದಾನದ ಭರವಸೆ ದೊರೆಯುತ್ತಿದೆಯೇ ಹೊರತು ಅನುದಾನ ಬಿಡುಗಡೆಯಾಗುತ್ತಿಲ್ಲ. ಈ ಬಾರಿಯೂ ಅನುದಾನದ ನಿರೀಕ್ಷೆಯಲ್ಲಿದ್ದೇವೆ. ಅನುದಾನ ನೀಡದಿದ್ದಲ್ಲಿ ಗೌಡ ಜನಾಂಗದ ಕ್ರೀಡೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗಾಗಿ ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ಆಟಗಾರರ ನೋಂದಣಿ ಆರಂಭ
ಜಿಪಿಎಲ್ ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಟಿ-೧೦ ಕ್ರಿಕೆಟ್ ಪಂದ್ಯಾವಳಿಗೆ ಆಟಗಾರರ ನೋಂದಣಿ ಪ್ರಕ್ರಿಯೆ ಆಫ್ಲೈನ್ ಮತ್ತು ಆನ್ಲೈನ್ ಮೂಲಕ ಆರಂಭಗೊAಡಿದ್ದು, ನವೆಂಬರ್ ೨೫ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ೮೧೦೫೧೬೦೫೪೭, ೯೯೭೨೩೭೬೧೫೧, ೯೬೬೩೨೫೩೦೨೫ ಹಾಗೂ ೭೦೧೯೬೭೧೧೩೦ ಸಂಪರ್ಕಿಸಬಹುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಯುವ ವೇದಿಕೆ ಅಧ್ಯಕ್ಷ ಬಾಳಾಡಿ ಮನೋಜ್, ಉಪಾಧ್ಯಕ್ಷ ಪರಿಚನ ಸತೀಶ್, ಕಾರ್ಯದರ್ಶಿ ಕೆದಂಬಾಡಿ ಕಾಂಚನ ಗೌಡ, ಕೋಶಾಧಿಕಾರಿ ನವೀನ್ ದೇರಳ ಹಾಗೂ ಕ್ರೀಡಾಧ್ಯಕ್ಷ ಕುಟ್ಟನ ಪ್ರಶಾಂತ್ ಉಪಸ್ಥಿತರಿದ್ದರು.