ಸೋಮವಾರಪೇಟೆ, ನ. ೧೪: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲ, ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ, ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ತಾ. ೧೭ ರಂದು ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸಮುದಾಯ ಭವನದಲ್ಲಿ ೭೩ನೇ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ.
ಸಹಕಾರ ಸಂಸ್ಥೆಗಳ ಮೂಲಕ ಮೌಲ್ಯವರ್ಧನೆ-ಬ್ರಾö್ಯಂಡ್ ನಿರ್ಮಾಣ ದಿನಾಚರಣೆಯಾಗಿ ಈ ಬಾರಿ ಸಹಕಾರ ಸಪ್ತಾಹವನ್ನು ಆಚರಿಸುತ್ತಿದ್ದು, ಅಂದು ಪೂರ್ವಾಹ್ನ ೧೦.೩೦ಕ್ಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ರಾಬಿನ್ ದೇವಯ್ಯ ಉದ್ಘಾಟಿಸಲಿದ್ದಾರೆ.
ಕೊಡಗಿನಲ್ಲಿ ಪ್ರಥಮ ಬಾರಿಗೆ ಸಹಕಾರ ಸಂಘವನ್ನು ಸ್ಥಾಪಿಸಿದ ಕುರಾದಗೌಡ್ನಮನೆ ಪಿ. ದೊಡ್ಡಯ್ಯ ಅವರ ಪುತ್ಥಳಿ ನಿರ್ಮಾಣಕ್ಕೆ ಶಾಸಕ ಡಾ. ಮಂತರ್ ಗೌಡ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತಳ್ಳಿ ಸಹಕಾರ ಸಂಘದ ಅಧ್ಯಕ್ಷ ಕೆ.ಆರ್. ಶಿವಕುಮಾರ್ ವಹಿಸಲಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಗಣಪತಿ, ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಹೆಚ್.ಕೆ. ಮಾದಪ್ಪ ಸೇರಿದಂತೆ ಯೂನಿಯನ್ನ ನಿರ್ದೇಶಕರುಗಳು, ಸಹಕಾರ ಸಂಘಗಳ ಉಪ ನಿಬಂಧಕಿ ಶೈಲಜ, ನಿವೃತ್ತ ಪ್ರಾಂಶುಪಾಲೆ ಎಂ.ಎA. ಶ್ಯಾಮಲ ಅವರುಗಳು ಭಾಗಿಯಾಗಲಿದ್ದಾರೆ ಎಂದು ಪ್ರಬಾರ ಕಾರ್ಯನಿರ್ವಹಣಾಧಿಕಾರಿ ಕೆ. ಸಂಧ್ಯಾ ತಿಳಿಸಿದ್ದಾರೆ.