ಮಡಿಕೇರಿ, ನ. ೧೪: ಇಲ್ಲಿನ ಮಂಗೇರಿರ ಮುತ್ತಣ್ಣ ವೃತ್ತದಿಂದ ರಾಜಾಸೀಟು ಉದ್ಯಾನದ ಕಡೆಗೆ ತೆರಳುವ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಹಿನ್ನೆಲೆಯಲ್ಲಿ ಉದ್ಯಾನಕ್ಕೆ ಸಾರ್ವಜನಿಕರ, ಪ್ರವಾಸಿಗರ ಪ್ರವೇಶವನ್ನು ತಾ.೧೬ರಿಂದ ತಾ.೩೦ ರವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.

ಹಾಗೆಯೇ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ಅಡ್ಡ ರಸ್ತೆಯಿಂದ ಲಿವಾ ಕ್ಲಿನಿಕ್‌ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನೂ ತಾ.೧೬ರಿಂದ ಡಿ.೧೫ ರವರೆಗೆ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.