ಗುಡ್ಡೆಹೊಸೂರು, ನ. ೧೫: ರಾಜ್ಯ ಸರಕಾರ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದು, ಹೆಣ್ಣು ಮಕ್ಕಳು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಉನ್ನತ ಸ್ಥಾನಮಾನ ಹೊಂದಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಬೆಟಗೇರಿ ಗ್ರಾಮದಲ್ಲಿ ರಾಜ್ಯ ವಕ್ಫ್ ಮತ್ತು ಅಲ್ಪಸಂಖ್ಯಾತರ ಮಂಡಳಿ ವತಿಯಿಂದ ೫.೮೦ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಹಿಳಾ ಪದವಿಪೂರ್ವ ಕಾಲೇಜು ಕಟ್ಟಡದ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ಮೂಲಕ ಕಾಮಗಾರಿ ಅನುಷ್ಠಾನಗೊಳ್ಳಲಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಆದರೆ, ಹೆಣ್ಣು ಮಕ್ಕಳು ಪಿಯುಸಿ ಶಿಕ್ಷಣ ಮುಗಿಸಿದರೆ ಸಾಕು, ಮದುವೆ ಮಾಡಿಬಿಡೋಣ ಎಂಬ ಮನೋಭಾವ ಕೆಲವು ಪೋಷಕರಲ್ಲಿದೆ. ಈ ಮನಸ್ಥಿತಿ ಬದಲಾಗಬೇಕು. ಅಂಬೇಡ್ಕರ್ ಅವರ ಆಶಯದಂತೆ ಹೆಣ್ಣು ಮಕ್ಕಳಿಗೂ ಶಿಕ್ಷಣದಲ್ಲಿ ಸಮಾನ ಅವಕಾಶ ದೊರೆಯಬೇಕು ಎಂದರು.
ಇAದಿನ ಮಕ್ಕಳು ವಿದ್ಯಾಭ್ಯಾಸದ ವಿಚಾರವಾಗಿ ಪೋಷಕರನ್ನೇ ಪ್ರಶ್ನಿಸುವಷ್ಟು ಪ್ರಜ್ಞಾವಂತರಾಗಿದ್ದಾರೆ. ಆ ಭಯಕ್ಕಾದರೂ ಪೋಷಕರು ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.
ಈ ಕಾಲೇಜು ನಿರ್ಮಾಣದಿಂದ ಕುಶಾಲನಗರ ಭಾಗದ ನೂರಾರು ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ. ಕಾಲೇಜಿನ ಸೌಲಭ್ಯಗಳನ್ನು ವಿದ್ಯಾರ್ಥಿನಿಯರು ಸದುಪಯೋಗಪಡಿಸಿಕೊಳ್ಳಬೇಕು. ಸುಸಜ್ಜಿತ ವಸತಿ ನಿಲಯ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು. ಮೀಸಲಾತಿ ಅನ್ವಯ ಸಂಬAಧಪಟ್ಟ ಸಮುದಾಯದ ವಿದ್ಯಾರ್ಥಿನಿಯರ ದಾಖಲಾತಿ ಕಡಿಮೆಯಾದಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿನಿಯರಿಗೂ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ ನಿರ್ಮಿಸುವ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಯೋಜನೆಯೂ ಪ್ರಗತಿಯಲ್ಲಿದೆ ಎಂದರು.
ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕಾಲೇಜು ನಿರ್ಮಾಣದಿಂದ ಈ ಪ್ರದೇಶದಲ್ಲಿ ಹಂತ ಹಂತವಾಗಿ ಮೂಲಸೌಕರ್ಯಗಳ ಅಭಿವೃದ್ಧಿಯಾಗಲಿದೆ ಎಂದರು.
ಕುಶಾಲನಗರ ಜಾಮಿಯಾ ಮಸೀದಿ ಸಮಿತಿ ಕಾರ್ಯದರ್ಶಿ ಶಫಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಧ್ಯಕ್ಷ ಅಬ್ದುಲ್ ರಜಾಕ್, ಕುಶಾಲನಗರ ಜಾಮಿಯಾ ಮಸೀದಿ ಅಧ್ಯಕ್ಷ ಮೆಹ್ತಾಬ್ ಅಹಮದ್, ಮಾಜಿ ಅಧ್ಯಕ್ಷರಾದ ಫಜಲುಲ್ಲಾ, ಅಲೀಂ, ಗುಡ್ಡೆಹೊಸೂರು ವಲಯ ಕಾಂಗ್ರೆಸ್ ಅಧ್ಯಕ್ಷ ನಂಗಾರು ಜಗ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚಂದ್ರಶೇಖರ್, ಇರ್ಫಾನ್, ಬೆಳ್ಳಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.