ಮಡಿಕೇರಿ, ನ. ೧೬: ತಿತಿಮತಿ ಗ್ರಾಮದ ಮರಪಾಲ ಪೈಸಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೇಟಿ ನೀಡಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು.

ಈ ಸಂದರ್ಭ ಪೈಸಾರಿ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, ಅಲ್ಲಿನ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಸಂಬAಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಿವಾಸಿಗಳ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಹಂತ ಹಂತವಾಗಿ ಶೀಘ್ರ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಪೈಸಾರಿ ನಿವಾಸಿಗಳು ತಮ್ಮ ಪ್ರದೇಶಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪೊನ್ನಣ್ಣ, ಈ ಕುರಿತು ಸರಕಾರದ ಮಟ್ಟದಲ್ಲಿ ಚರ್ಚಿಸಿ, ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

ಈ ಸಂದರ್ಭ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್, ಭಾಗಮಂಡಲ ಹಾಗೂ ತಲಕಾವೇರಿ-ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾನಂಡ ಪ್ರಥ್ಯು, ಪಕ್ಷದ ವಕ್ತಾರ ಟಾಟು ಮೊಣ್ಣಪ್ಪ, ವಲಯ ಅಧ್ಯಕ್ಷ ನವೀನ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ, ಪಂಕಜ, ಡಿಸಿಸಿ ಸದಸ್ಯ ವಿನಯ್ ಕುಮಾರ್, ತಿತಿಮತಿ ಮಹಿಳಾ ಕಾಂಗ್ರೆಸ್ ವಲಯ ಅಧ್ಯಕ್ಷೆ ರೋಶಿಣಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಸದಸ್ಯೆ ಫಿಲೋಮಿನ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಅಫ್ರೋಜ್, ಸುಬ್ರು, ಸತೀಶ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.