ಕುಶಾಲನಗರ, ನ. ೧೬: ಪಟ್ಟಣದ ಫಾತಿಮಾ ಕಾನ್ವೆಂಟ್ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವದ ಅಂಗವಾಗಿ ‘ಮಾದಕ ದ್ರವ್ಯ ಮುಕ್ತ ಭಾರತ, ಆರೋಗ್ಯಕರ ಯುವ ಭಾರತ’ ಎಂಬ ಸಂದೇಶದೊAದಿಗೆ ವಾಕಥಾನ್ ಕಾರ್ಯಕ್ರಮ ಆಯೋಜಿಸಲಾಯಿತು.
ಬೆಳಿಗ್ಗೆ ೬.೩೦ಕ್ಕೆ ಫಾತಿಮಾ ಕಾನ್ವೆಂಟ್ ಆವರಣದಿಂದ ಆರಂಭಗೊAಡ ಆರೋಗ್ಯ ಜಾಗೃತಿ ನಡಿಗೆಗೆ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಹಸಿರು ನಿಶಾನೆ ತೋರಿದರು.
ಈ ಸಂದರ್ಭ ಮಾತನಾಡಿದ ಶಾಸಕರು, ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಪ್ರತಿನಿತ್ಯ ವ್ಯಾಯಾಮ ಹಾಗೂ ನಡಿಗೆಗೆ ಸಮಯ ಮೀಸಲಿಡಬೇಕು. ಉತ್ತಮ ಆರೋಗ್ಯದಿಂದ ಮಾತ್ರ ಆರೋಗ್ಯಕರ ಸಮಾಜ ನಿರ್ಮಿಸಲು ಸಾಧ್ಯ. ಶಿಕ್ಷಣ ಸಂಸ್ಥೆಯು ೫೦ ವರ್ಷಗಳ ಸಾರ್ಥಕ ಸೇವೆಯ ಸಂಭ್ರಮ ಆಚರಿಸುತ್ತಿರುವುದು ಶ್ಲಾಘನೀಯ ಎಂದು ಅಭಿನಂದಿಸಿದರು.
ಕುಶಾಲನಗರದ ಮುಖ್ಯ ರಸ್ತೆಯ ಮೂಲಕ ಸಾಗಿದ ವಾಕಥಾನ್ನಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡರು. ಮಾರುಕಟ್ಟೆ ಪಟ್ಟಣದ ಮೂಲಕ ಸಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನವರೆಗೆ ತೆರಳಿದ ನಡಿಗೆ ಕಾರ್ಯಕ್ರಮ ಸಮಾಪನಗೊಂಡಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕೊಡಗು ಜಿಲ್ಲಾ ಗ್ರೇಡ್-೧ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಡಾ. ಸದಾಶಿವಯ್ಯ ಎಸ್. ಪಲ್ಲೇದ್ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಿಂದಲೇ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ಮಾದಕ ವಸ್ತುಗಳಿಂದ ದೂರವಿದ್ದು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಮಂಡಳಿಯ ಪ್ರಮುಖರಾದ ಸಿಸ್ಟರ್ ಆಗ್ನೆಸ್, ಸಿಸ್ಟರ್ ಫ್ಲೋರೆಟ್, ಸಿಸ್ಟರ್ ಅರ್ಪಿತಾ, ಸಿಸ್ಟರ್ ಸೋಫಿಯಾ, ಹಳೆ ವಿದ್ಯಾರ್ಥಿ ಸಂಘದ ಲಿಪಿಕಾ, ಕಾರ್ಯಕ್ರಮ ಆಯೋಜಕರಾದ ಭಾರತಿ ದೇವಯ್ಯ, ಬೀನಾ ರಾಜೇಂದ್ರ, ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕಾಂಗ್ರೆಸ್ ಪ್ರಮುಖರಾದ ಮಂಜುನಾಥ್ ಗುಂಡೂರಾವ್, ಜೋಸೆಫ್ ವಿಕ್ಟರ್ ಸೋನ್ಸ್, ಶಿಕ್ಷಕ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.