ನಾಪೋಕ್ಲು, ನ. ೧೬: ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ‘ಹೆಚ್ಐವಿ ಏಡ್ಸ್ ಅರಿವಿನ ಮಾಸಾಚರಣೆ - ೨೦೨೬’ರ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ (ಕೆ.ಪಿ.ಎಸ್.) ವಿದ್ಯಾರ್ಥಿಗಳು ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ನಡೆದ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಪ್ರೌಢಶಾಲೆಗಳ ಒಟ್ಟು ೧೨ ತಂಡಗಳು ಪಾಲ್ಗೊಂಡಿದ್ದವು.
ವಿಜೇತರ ವಿವರ:
ಪ್ರಥಮ ಸ್ಥಾನ: ನಾಪೋಕ್ಲು ಕೆಪಿಎಸ್ ಶಾಲೆಯ ಫಾತಿಮತುಲ್, ಅಫ್ರಿನಾ ಬಿ.ಜೆ. ಮತ್ತು ಸಿಯಾನ ಸಿ.ಹೆಚ್. ತಂಡ ೩೭ ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಬಹುಮಾನಕ್ಕೆ ಭಾಜನವಾಯಿತು. ವಿಜೇತ ತಂಡಕ್ಕೆ ರೂ. ೬,೦೦೦ ನಗದು ಹಾಗೂ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ದ್ವಿತೀಯ ಸ್ಥಾನ: ಮಡಿಕೇರಿಯ ಜನರಲ್ ತಿಮ್ಮಯ್ಯ ಶಾಲೆಯ ಎನ್.ಸಿ. ಕಾವೇರಪ್ಪ ಮತ್ತು ರಿಷಿತ್ ಕೆ.ಎಸ್. ತಂಡ ೨೭ ಅಂಕಗಳನ್ನು ಗಳಿಸಿ ದ್ವಿತೀಯ ಸ್ಥಾನದೊಂದಿಗೆ ರೂ. ೫,೦೦೦ ನಗದು ಹಾಗೂ ಪ್ರಮಾಣಪತ್ರ ಪಡೆಯಿತು
ತೃತೀಯ ಸ್ಥಾನ: ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಿಂಚನ ಪಿ.ಎಸ್. ಮತ್ತು ಪ್ರಾರ್ಥನಾ ಪೊನ್ನಮ್ಮ ತಂಡ ೨೬ ಅಂಕಗಳೊAದಿಗೆ ತೃತೀಯ ಸ್ಥಾನ ಪಡೆದುಕೊಂಡಿತು. ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಸನತ್ ಕುಮಾರ್, ಯುವಜನರಲ್ಲಿ ಹೆಚ್ಐವಿ ಏಡ್ಸ್ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಇಂತಹ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ. ಆರೋಗ್ಯವಂತ ಯುವ ಸಮುದಾಯ ದಿಂದ ಮಾತ್ರ ಸುಭದ್ರ ದೇಶ ನಿರ್ಮಾಣ ಸಾಧ್ಯ," ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕಿ ಸುನಿತಾ ಮುತ್ತಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಪಿಓ ಮಲ್ಲೇಶ್, ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಅಶ್ವಿತ, ಯಮುನಾ, ಅರುಣ್ ಕುಮಾರ್ ಹಾಗೂ ಸಂಯೋಜಕ ಟೈನಿ ಉಪಸ್ಥಿತರಿದ್ದರು. ಗಣಿತ ಶಿಕ್ಷಕ ಸಿ.ಎಸ್. ಸುರೇಶ್ ಅವರು ರಸಪ್ರಶ್ನೆ ಸ್ಪರ್ಧೆಯ ನಿರ್ವಾಹಕರಾಗಿ (ಕ್ವಿಜ್ ಮಾಸ್ಟರ್) ಯಶಸ್ವಿಯಾಗಿ ಕಾರ್ಯನಿರ್ವಹಿಸಿದರು.