ಚೆಯ್ಯಂಡಾಣೆ, ನ. ೧೬: ಆಟೋರಿಕ್ಷಾ ಹಾಗೂ ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಸೋಮವಾರ ನಾಪೋಕ್ಲು-ವೀರಾಜಪೇಟೆ ಮುಖ್ಯ ರಸ್ತೆಯ ಕೈಕಾಡು ಗ್ರಾಮದಲ್ಲಿ ನಡೆದಿದೆ.
ನಾಪೋಕ್ಲು ಕಡೆಯಿಂದ ತೆರಳುತ್ತಿದ್ದ ಆಟೋರಿಕ್ಷಾ ಹಾಗೂ ಕೈಕಾಡು ಕಡೆಯಿಂದ ನಾಪೋಕ್ಲುವಿನತ್ತ ಬರುತ್ತಿದ್ದ ಸ್ಕೂಟಿ ನಡುವೆ ಕೈಕಾಡು ಸಮೀಪದ ರಸ್ತೆ ತಿರುವಿನಲ್ಲಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊAಡಿದ್ದು, ಆಟೋ ಚಾಲಕ ಹಾಗೂ ಸ್ಕೂಟಿ ಸವಾರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.