ಮಡಿಕೇರಿ, ನ. ೧೬; ಮಡಿಕೇರಿಯ ಹೊರ ವಲಯದ ಗಾಳೀಬೀಡು ರಸ್ತೆ ಕಾಮಗಾರಿಯನ್ನು ಮುಂದಿನ ಜನವರಿ ೧೫ರ ಒಳಗಡೆ ಪೂರ್ಣಗೊಳಿಸಬೇಕು, ವಿಳಂಬ ಮಾಡಿದ್ದಲ್ಲಿ ಸದನದಲ್ಲಿ ಅಧಿಕಾರಿಗಳ ವಿರುದ್ಧ ಹಕ್ಕು ಚ್ಯುತಿ ಮಂಡಿಸುವದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಎಚ್ಚರಿಕೆ ನೀಡಿದ್ದಾರೆ.
ಗಾಳಿಬೀಡು ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಒಂದು ವರ್ಷ ಕಳೆದರೂ ಇದುವರೆಗೂ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ತಾ.೧೪ರಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಈ ಸಂಬAಧ ಶಾಸಕರು ಲೋಕೋಪಯೋಗಿ ಇಲಾಖಾ ಕಚೇರಿಯಲ್ಲಿ ಅಧಿಕಾರಿಗಳ ಸಮ್ಮುಖ ಗ್ರಾಮಸ್ಥರ ಸಭೆ ಏರ್ಪಡಿಸಿದ್ದರು. ಸಭೆಯಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆ ಹೇಳಿಕೊಂಡರಲ್ಲದೆ ಕೂಡಲೇ ರಸ್ತೆ ನಿರ್ಮಾಣ ಮಾಡಿಕೊಡುವಂತೆ ಬೇಡಿಕೆಯಿಟ್ಟರು.
ಗ್ರಾಮಸ್ಥರ ಬೇಡಿಕೆಗಳನ್ನು ಆಲಿಸಿದ ಶಾಸಕರು ಇನ್ನು ಮುಂದಕ್ಕೆ ಕಾಮಗಾರಿ ವಿಳಂಬಕ್ಕೆ ಅವಕಾಶ ಮಾಡಿ ಕೊಡುವದಿಲ್ಲ., ಕೂಡಲೇ ಕಾಮಗಾರಿ ಆರಂಭಿಸಿ ರಸ್ತೆ ನಿರ್ಮಾಣ ಮಾಡಬೇಕು. ಈ ವರ್ಷದ ಮೇ ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು, ಆದರೆ, ಗುತ್ತಿಗೆದಾರರು ಹಾಗೂ ಲೋಕೋಪಯೋಗಿ ಇಲಾಖಾ ಅಭಿಯಂತರ ಪ್ರಭು ಅವರ ನಿರ್ಲಕ್ಷö್ಯದಿಂದಾಗಿ ವಿಳಂಬವಾಗಿದೆ. ಮುಂದಿನ ಒಂದೂವರೆ ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಅಭಿಯಂತರರ ವಿರುದ್ಧ ಹಕ್ಕು ಚ್ಯುತಿ ಮಂಡಿಸುವದಾಗಿ ಸಭೆಯಲ್ಲಿ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖಾ ಅಭಿಯಂತರ ಪ್ರಭು, ಕಾಂಗ್ರೆಸ್ ಪಕ್ಷದ ಪ್ರಮುಖರುಗಳಾದ ಶಾಂತೆಯAಡ ಅಚ್ಚಯ್ಯ, ಯಾಲದಾಳು ಸೋಮಯ್ಯ, ಕೊಂಬಾರನ ಗಣಪತಿ ಇದ್ದರು.