ಸಿದ್ದಾಪುರ, ನ.೧೬: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕಾರ್ಮಿಕ ಮುಖಂಡ ಎನ್.ಡಿ. ಕುಟ್ಟಪ್ಪನ್, ಕಳೆದ ಐದು ವರ್ಷಗಳಲ್ಲಿ ಆಡಳಿತ ನಡೆಸಿದ ಆಡಳಿತ ಮಂಡಳಿಗಳು ಹದಗೆಟ್ಟಿರುವ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಗಮನಹರಿಸದೆ ನಿರ್ಲಕ್ಷö್ಯ ವಹಿಸಿವೆ ಎಂದು ಆರೋಪಿಸಿದರು. ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಆಡಳಿತ ಮಂಡಳಿಗಳು ವಿಫಲವಾಗಿದ್ದು, ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಸ್ವಾರ್ಥ ರಾಜಕಾರಣಕ್ಕೆ ಪಂಚಾಯಿತಿಯನ್ನು ಬಳಸಿಕೊಂಡಿವೆ. ಗುಹ್ಯ, ಕೂಡುಗದ್ದೆ ಸೇರಿದಂತೆ ವಿವಿಧ ಭಾಗಗಳ ರಸ್ತೆಗಳು ಗುಂಡಿಗಳಿAದ ಕೂಡಿದ್ದು, ಅಪಘಾತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಸಂಬAಧಪಟ್ಟ ಮೇಲಧಿಕಾರಿಗಳು, ಆಡಳಿತಾಧಿಕಾರಿ ಹಾಗೂ ಅಭಿವೃದ್ಧಿ ಅಧಿಕಾರಿ ತಕ್ಷಣ ಕ್ರಮ ಕೈಗೊಂಡು ರಸ್ತೆ ಗುಂಡಿಗಳನ್ನು ಮುಚ್ಚಬೇಕೆಂದು ಆಗ್ರಹಿಸಿದರು. ಸಿಪಿಐಎಂ ಮುಖಂಡ ಎಚ್.ಬಿ. ರಮೇಶ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರಕ್ಕೂ ತೊಂದರೆಯಾಗಿದೆ. ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚದಿದ್ದಲ್ಲಿ ಸಾರ್ವಜನಿಕರನ್ನು ಸಂಘಟಿಸಿ ಗ್ರಾಮ ಪಂಚಾಯಿತಿ ಎದುರು ಮತ್ತಷ್ಟು ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಗೂ ಮುನ್ನ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಪಂಚಾಯಿತಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಅವರಿಗೆ ಮನವಿ ಸಲ್ಲಿಸಿ, ಪಂಚಾಯಿತಿ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಸಿಪಿಐಎಂ ಪದಾಧಿಕಾರಿಗಳಾದ ಅನಿಲ್ ಕುಟ್ಟಪ್ಪ, ಎಸ್. ಬೈಜು, ಪಿ.ಯು. ಮುಸ್ತಫ, ಕರ್ಪಸ್ವಾಮಿ, ಸಿ.ಪಿ. ಮಯ್ಯದು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.