ಶ್ರೀಮಂಗಲ, ನ. ೧೭: ಪೊನ್ನಂಪೇಟೆ ತಾಲೂಕು ಟಿ. ಶೆಟ್ಟಿಗೇರಿಯ ಮಾಯಣಮಾಡ ಮಂದಯ್ಯ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ೭೧ನೇ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಶಾಲಾ ವತಿಯಿಂದ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ವಿಭಾಗದ ಆಟೋಟ ಸ್ಪರ್ಧೆ ಗಳಲ್ಲಿ ೧೫೦೦ ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಸುಬ್ರಮಣಿ ಪಿ ಸಿ ಹಾಗೂ ಜಾವಲಿನ್ ಎಸೆತದಲ್ಲಿ ತೃತೀಯ ಸ್ಥಾನ ಪಡೆದ ರತನ್ ಪಿ ಆರ್ ಅವರುಗಳನ್ನು ಸನ್ಮಾನಿಸ ಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು, ಪೋಷಕರು, ಮುಖ್ಯ ಶಿಕ್ಷಕರು, ಸಹಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.