ಚೆಟ್ಟಳ್ಳಿ, ನ. ೧೭: ಸುಂಟಿಕೊಪ್ಪ ಸಮೀಪದ ಕೆದಕಲ್‌ನ ಪುಲ್ಲೇರ ತಿಮ್ಮಯ್ಯ ಅವರ ಕಾಫಿ ತೋಟದಲ್ಲಿ ಸುಮಾರು ೧೦ ವರ್ಷ ಪ್ರಾಯದ ಕಾಡುಕೋಣ ಗುಂಡೇಟಿನಿAದ ಮೃತಪಟ್ಟಿರುವ ಬಗ್ಗೆ ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಮೃತಪಟ್ಟಿದ್ದ ಕೋಣದ ಕಿಬ್ಬೊಟ್ಟೆಯ ಭಾಗದಲ್ಲಿ ಗುಂಡೇಟಿನ ಗುರುತು ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆ ವೇಳೆ ದೇಹದೊಳಗೆ ಎರಡು ಗುಂಡುಗಳು ದೊರೆತಿವೆ.

ಘಟನೆ ಕುರಿತು ಮಾಹಿತಿ ದೊರೆತ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್ ಅವರ ಸಮ್ಮುಖದಲ್ಲಿ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಪಶುವೈದ್ಯಾಧಿಕಾರಿಗಳಾದ ಡಾ. ಮುಜೀಬ್ ಹಾಗೂ ಡಾ. ಸಲೀಂ ಪರಿಶೀಲನೆ ನಡೆಸಿದಾಗ ಕಾಡುಕೋಣದ ದೇಹದಲ್ಲಿ ಗುಂಡೇಟಿನ ಗುರುತು ಇರುವುದು ಕಂಡುಬAದಿದೆ.

ತೋಟದ ಮಾಲೀಕರು ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಲು ಅನುಮತಿ ನೀಡದ ಹಿನ್ನೆಲೆಯಲ್ಲಿ ಮೃತದೇಹವನ್ನು ಆನೆಕಾಡು ಮೀಸಲು ಅರಣ್ಯಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ವೇಳೆ ದೇಹದೊಳಗೆ ಎರಡು ಗುಂಡುಗಳು ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬAಧಿಸಿದAತೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಈ ಸಂದರ್ಭದಲ್ಲಿ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ರಕ್ಷಿತ್ ಆರ್., ಅರಣ್ಯಾಧಿಕಾರಿ ಉಮೇಶ್ ಹಾಗೂ ಅರಣ್ಯ ಸಿಬ್ಬಂದಿ ಹಾಜರಿದ್ದರು.

ತನಿಖೆಗೆ ಆಗ್ರಹ

ಸುಂಟಿಕೊಪ್ಪ: ಕೆದಕಲ್ ನೇಗದಾಳು ಗ್ರಾಮದಲ್ಲಿ ಕಾಡುಕೋಣ ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯವರು ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಸಾರ್ವಜನಿಕರಿಗೆ ತಿಳಿಯಪಡಿಸಬೇಕೆಂದು ಹೋಬಳಿ ರೈತ ಸಂಘ ಆಗ್ರಹಿಸಿದೆ.

ಸುಂಟಿಕೊಪ್ಪ ಹೋಬಳಿ ಕೆದಕಲ್ ನೇಗದಾಳು ಗ್ರಾಮದಲ್ಲಿ ಅರಣ್ಯ ಇಲಾಖೆಯೊಂದಿಗೆ ಮಾತುಕತೆ ನಡೆಸಿದ ಸಂದರ್ಭ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಹೇರೂರು ಮಾತನಾಡಿ, ವನ್ಯಜೀವಿಗಳ ಹತ್ಯೆ ಯಾವುದೇ ಕಾರಣಕ್ಕೂ ಸಹಿಸಲಾಗದು. ಈ ಪ್ರಕರಣವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಅಧ್ಯಕ್ಷ ಎನ್.ಸಿ. ಕ್ಲೆöÊವ್ ಪೊನ್ನಪ್ಪ ಮಾತನಾಡಿ, ಪ್ರಸ್ತುತ ಕಾಫಿ ಕೊಯ್ಲಿನ ಸಮಯವಾಗಿದ್ದು, ಪ್ರತಿನಿತ್ಯ ಕಾಡುಪ್ರಾಣಿಗಳು ತೋಟಗಳಿಗೆ ಬರುತ್ತಿರುವುದರಿಂದ ರೈತರು ಹಾಗೂ ಕಾರ್ಮಿಕರಲ್ಲಿ ಆತಂಕ ಮತ್ತು ಭಯದ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕಾಡುಕೋಣಗಳು ತೋಟಗಳಿಗೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅವುಗಳನ್ನು ಕಾಡಿಗೆ ಮರಳಿಸುವ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸುಂಟಿಕೊಪ್ಪ ರೈತ ಸಂಘದ ಪದಾಧಿಕಾರಿಗಳಾದ ದಾಸಂಡ ರಮೇಶ್ ಚೆಂಗಪ್ಪ, ಮಂಜುನಾಥ್, ಮಾಗಲು ವಸಂತ, ಉದಯ, ಸಂಜು ಪೊನ್ನಪ್ಪ, ಸೋಮಯ್ಯ, ಜಗದೀಶ್, ಗೋಪಿನಾಥ್, ಪುಲ್ಲೇರ ವಸಂತ, ವೆಂಕಪ್ಪ ಹಾಗೂ ಸತೀಶ್ ಇದ್ದರು.