ಗೋಣಿಕೊಪ್ಪಲು, ನ. ೧೭: ಕ್ರೀಡೆಯ ತವರೂರು ಎಂಬ ಹೆಗ್ಗಳಿಕೆ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಕ್ರೀಡಾ ಕ್ಷೇತ್ರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳ ಕೊರತೆಯಿದೆ. ಯುವ ಕ್ರೀಡಾಪಟುಗಳಿಗೆ ಸೂಕ್ತ ಸೌಲಭ್ಯ ಹಾಗೂ ತರಬೇತಿ ದೊರೆತಲ್ಲಿ ರಾಷ್ಟç ಮತ್ತು ಅಂತರಾರಾಷ್ಟಿçÃಯ ಮಟ್ಟದಲ್ಲಿ ಮತ್ತಷ್ಟು ಸಾಧನೆ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ಜಿಲ್ಲೆಯ ಯಾವುದೇ ಪ್ರತಿಭಾವಂತ ಕ್ರೀಡಾಪಟು ಅವಕಾಶಗಳಿಂದ ವಂಚಿತರಾಗಬಾರದು ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಹೇಳಿದರು.
ಗೋಣಿಕೊಪ್ಪಲುವಿನ ಕ್ಯಾಲ್ಸ್ ವಿದ್ಯಾಸಂಸ್ಥೆಯ ಟರ್ಫ್ ಮೈದಾನದಲ್ಲಿ ಕೈಗ್ ಸ್ಪೋರ್ಟ್ಸ್ ಫೌಂಡೇಷನ್ ಹಾಗೂ ಅಮ್ಮತ್ತಿಯ ಕಾವೇರಿ ರಾಯಲ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಿರುವ ಎರಡನೇ ಆವೃತ್ತಿಯ ಹಾಕಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೊನ್ನಂಪೇಟೆ ತಾಲೂಕಿನ ವಿ. ಬಾಡಗದಲ್ಲಿ ೧೧ ಎಕರೆ ಭೂಮಿಯನ್ನು ಕಾಯ್ದಿರಿಸಿ, ಸುಮಾರು ೧೦೦ ಕೋಟಿ ರೂ. ವೆಚ್ಚದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆ ರೂಪಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ಕೊಡಗಿನ ಯುವ ಕ್ರೀಡಾಪಟುಗಳಿಗೆ ವಿವಿಧ ಕ್ರೀಡೆಗಳಲ್ಲಿ ಸಾಧನೆ ಮಾಡಲು ಉತ್ತಮ ಅವಕಾಶಗಳು ಲಭಿಸಲಿವೆ. ಹಾಕಿ ಕ್ರೀಡೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೈಗ್ ಸಂಸ್ಥೆ ಪಂದ್ಯಾವಳಿ ಆಯೋಜಿಸುತ್ತಿರುವುದು ಶ್ಲಾಘನೀಯ. ವರ್ಷದಿಂದ ವರ್ಷಕ್ಕೆ ಉತ್ತಮ ರೀತಿಯಲ್ಲಿ ಪಂದ್ಯಾವಳಿ ಆಯೋಜಿಸುವ ಮೂಲಕ ಸಂಸ್ಥೆ ಕ್ರೀಡಾ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿ, ಕೊಡಗಿನಲ್ಲಿ ವಿವಿಧ ಕ್ರೀಡಾಕೂಟಗಳು ನಡೆಯುತ್ತಿದ್ದು, ಸಾರ್ವಜನಿಕರ ಪ್ರೋತ್ಸಾಹ ಅತ್ಯಗತ್ಯ. ಕೈಗ್ ಸಂಸ್ಥೆ ರಾಷ್ಟçಮಟ್ಟದ ಪಂದ್ಯಾವಳಿ ಆಯೋಜಿಸುವ ಮೂಲಕ ಅಂತರರಾಷ್ಟಿçÃಯ ಆಟಗಾರರನ್ನು ಯುವ ಪ್ರತಿಭೆಗಳಿಗೆ ಪರಿಚಯಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದುರು.
ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಮಾತನಾಡಿ, ಕ್ರೀಡಾಕೂಟ ಆಯೋಜಿಸುವುದು ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಸುಲಭದ ಕೆಲಸವಲ್ಲ. ಕಳೆದ ಎರಡು ವರ್ಷಗಳಿಂದ ಕೈಗ್ ಸಂಸ್ಥೆ ಕ್ರೀಡಾ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರ ಈ ಬಾರಿ ಕ್ರೀಡೆಗೆ ಹೆಚ್ಚಿನ ಅನುದಾನ ಒದಗಿಸಿದ್ದು, ಕೊಡಗಿನಲ್ಲಿ ಮತ್ತೊಂದು ಕ್ರೀಡಾ ವಸತಿ ನಿಲಯ ಆರಂಭಿಸಲು ಬಜೆಟ್ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಸೂಕ್ತ ಸ್ಥಳ ಗುರುತಿಸಿದ ಬಳಿಕ ಕಾಮಗಾರಿ ಆರಂಭಿಸಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.೩ರಷ್ಟು ಮೀಸಲಾತಿ ಸೌಲಭ್ಯವಿದ್ದು, ಯುವಕರು ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಕೈಗ್ ಸಂಸ್ಥೆಯ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ವೈದ್ಯ ಡಾ. ಮುಕ್ಕಾಟಿರ ಸಿ. ಕಾರ್ಯಪ್ಪ, ಹಲವು ದಶಕಗಳ ಹಿಂದೆಯೇ ಕೊಡಗಿನಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡಲು ಅನೇಕ ಗಣ್ಯರು ಶ್ರಮಿಸಿದ್ದಾರೆ. ಅಂತಹ ಸಾಧಕರನ್ನು ಸ್ಮರಿಸುವುದರೊಂದಿಗೆ ಜಿಲ್ಲೆಯಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ತರಬೇತಿ ನೀಡುವ ಮೂಲಕ ರಾಷ್ಟç ಮತ್ತು ಅಂತರರಾಷ್ಟಿçÃಯ ಮಟ್ಟದಲ್ಲಿ ಅವಕಾಶ ಕಲ್ಪಿಸಬೇಕು. ವಿವಿಧ ಸಂಘ-ಸAಸ್ಥೆಗಳು ಪಂದ್ಯಾವಳಿಗಳನ್ನು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಅರ್ಜುನ ಪ್ರಶಸ್ತಿ ಪುರಸ್ಕೃತ, ಮಾಜಿ ಒಲಿಂಪಿಯನ್ ಡಾ. ಎ.ಬಿ. ಸುಬ್ಬಯ್ಯ ಮಾತನಾಡಿ, ಪೋಷಕರು ತಮ್ಮ ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಬೇಕು. ವಾರ್ಷಿಕ ಬೇಸಿಗೆ ಶಿಬಿರಗಳಲ್ಲಿ ಭಾಗವಹಿಸುವಂತೆ ಉತ್ತೇಜಿಸಬೇಕು. ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಿದೆ ಎಂದರು.
ಕೈಗ್ ಗ್ರೂಪ್ ಮುಖ್ಯಸ್ಥ ಕುಟ್ಟಂಡ ಸುದಿನ್ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಅರ್ಜುನ ಪ್ರಶಸ್ತಿ ಪುರಸ್ಕೃತ, ಮಾಜಿ ಒಲಿಂಪಿಯನ್ ಡಾ. ಎ.ಬಿ. ಸುಬ್ಬಯ್ಯ, ಒಲಿಂಪಿಯನ್ ಹಾಗೂ ಕೊಡವ ಹಾಕಿ ಅಕಾಡೆಮಿ ಕಾರ್ಯಾಧ್ಯಕ್ಷ ಚೆಪ್ಪುಡಿರ ಪೂಣಚ್ಚ, ಅಂತರರಾಷ್ಟಿçÃಯ ಹಾಕಿ ಆಟಗಾರ ಹಾಗೂ ವಿಶ್ವಕಪ್ ಚಾಂಪಿಯನ್ಸ್ ಟ್ರೋಫಿ ವಿಜೇತ ಕೆ.ಕೆ. ಪೂಣಚ್ಚ, ಭಾರತೀಯ ಹಾಕಿ ತಂಡದ ಕೋಚ್ ಬಿ.ಜೆ. ಕಾರ್ಯಪ್ಪ, ಹಾಕಿ ಕೂರ್ಗ್ ಅಧ್ಯಕ್ಷ ಪಳಂಗAಡ ಲವಕುಮಾರ್, ಉಪಾಧ್ಯಕ್ಷೆ ಯಮುನಾ ಚಂಗಪ್ಪ, ಕಾವೇರಿ ರಾಯಲ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ಅಧ್ಯಕ್ಷ ಮೊಳ್ಳೆರ ಸದಾ ಅಪ್ಪಚ್ಚು, ಕುಟ್ಟಂಡ ಅಪ್ಪಯ್ಯ, ಕೈಗ್ ಸ್ಪೋರ್ಟ್ಸ್ ಫೌಂಡೇಷನ್ನ ಕುಂಡ್ಯೋಳAಡ ಶಶಿ ಮೇದಪ್ಪ, ಸಂಗೀತಾ ಸುದಿನ್ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಆರು ದಿನಗಳ ಕಾಲ ನಡೆಯುವ ಪಂದ್ಯಾವಳಿಯಲ್ಲಿ ೧೬ ತಂಡಗಳು ಸೆಣಸಾಡುತ್ತಿವೆ. ವಿವಿಧ ತಂಡಗಳಲ್ಲಿ ರಾಷ್ಟçಮಟ್ಟದ ಆಟಗಾರರು ಪಾಲ್ಗೊಂಡಿರುವುದು ಪಂದ್ಯಾವಳಿಯ ಮೆರುಗು ಹೆಚ್ಚಿಸಿದೆ.
ಮಾಳೇಟಿರ ಶ್ರೀನಿವಾಸ್, ಅಜ್ಜೆಟ್ಟಿರ ವಿಕ್ರಮ್ ಉತ್ತಪ್ಪ ಹಾಗೂ ಕೋದೇಂಗಡ ಲೇಖನ ಅಯ್ಯಣ್ಣ ವೀಕ್ಷಕ ವಿವರಣೆ ನೀಡಿದರು. ಅಜ್ಜೆಟ್ಟಿರ ವಿಕ್ರಮ್ ಉತ್ತಪ್ಪ ಕಾರ್ಯಕ್ರಮ ನಿರೂಪಿಸಿದರು. ಕಾವೇರಿ ರಾಯಲ್ಸ್ ರಿಕ್ರಿಯೇಷನ್ ಅಸೋಸಿಯೇಷನ್ನ ಮಾಚಿಮಾಡ ಸುವಿನ್ ಗಣಪತಿ ಸ್ವಾಗತಿಸಿ, ನೆಲ್ಲಮಕ್ಕಡ ಸಂಪತ್ ದೇವಯ್ಯ ವಂದಿಸಿದರು.
- ಹೆಚ್.ಕೆ. ಜಗದೀಶ್