ಸಿದ್ದಾಪುರ, ನ. ೧೭: ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗಿಯಿAದ ಕೋಟೆಮಚ್ಚಿಗೆ ತೆರಳುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಪೊನ್ನಣ್ಣ ಅವರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಚಾಲನೆ ನೀಡಿದರು.
ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಅವರ ಅನುದಾನದಿಂದ ರೂ.೭೫ ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರು ಮಾತನಾಡಿ, ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ ಪೊನ್ನಣ್ಣ ಅವರು ಕೋಟ್ಯಂತರ ರೂಪಾಯಿ ಅನುದಾನವನ್ನು ಅಭಿವೃದ್ಧಿ ಕಾರ್ಯಗಳಿಗೆ ನೀಡಿದ್ದು ಈ ಭಾಗದ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿಯು ಸುಗಮವಾಗಿ ಸಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವೀರಾಜಪೇಟೆ ಕಾಂಗ್ರೆಸ್ ಬ್ಲಾಕ್ ಉಪಾಧ್ಯಕ್ಷ ರವೀಂದ್ರ ಬಾವೆ, ವಲಯ ಅಧ್ಯಕ್ಷ ಮನು ಹೆಚ್.ಆರ್, ಗ್ರಾಮ ಪಂಚಾಯಿತಿ ಸದಸ್ಯರಾದ ಶೀಲಾ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಕಾವೇರಮ್ಮ, ಜೆ.ಕೆ. ರಾಮು, ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಾದ ಮುಸ್ತಫ, ಇಬ್ರಾಹಿಂ, ಮಿಲನ್ ಸುಬ್ಬಯ್ಯ ರತನ್ ಹಾಗೂ ಗ್ರಾಮಸ್ಥರು ಹಾಜರಿದ್ದರು.