ಪೊನ್ನಂಪೇಟೆ, ನ. ೧೭: ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿನಿ ಯರು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮೈ ಭಾರತ್ ಕೊಡಗು ವತಿಯಿಂದ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ “ನಶಾ ಮುಕ್ತ ಯುವ ಫಾರ್ ವಿಕಸಿತ ಭಾರತ್” ಎಂಬ ವಿಷಯದ ಕುರಿತು ಕೊಡಗು ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಸಿಐಟಿ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಆಂಡ್ ಇಂಜಿನಿಯರಿAಗ್ ವಿಭಾಗದ ೩ನೇ ಸೆಮಿಸ್ಟರ್ನ ವಿದ್ಯಾರ್ಥಿನಿ ಆದ್ವಿಕಾ ಪ್ರಥಮ ಸ್ಥಾನ ಹಾಗೂ ೧ನೇ ಸೆಮಿಸ್ಟರ್ನ ವಿದ್ಯಾರ್ಥಿನಿ ಬಬಿತಾ ಕೆ. ಆರ್. ತೃತೀಯ ಸ್ಥಾನ ಗಳಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಂಸ್ಥೆಯನ್ನು ಪ್ರತಿನಿಧಿಸಿದ್ದರು.