ನಾಪೋಕ್ಲು, ನ. ೧೭: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ೭೩ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಬರುವ ಸದಸ್ಯರ ಮನೆಗಳಿಗೆ ಭೇಟಿ ನೀಡಿ ಹೊಸ ಸದಸ್ಯರನ್ನು ಸೇರ್ಪಡೆಗೊಳಿಸುವ ಸದಸ್ಯತ್ವ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಡಿ ಅಭಿಯಾನಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಅಶೋಕ ಪೆರುಮುಂಡ, ನಿರ್ದೇಶಕರುಗಳಾದ ಜಯರಾಮ ನಿಡ್ಯಮಲೆ, ಧನಂಜಯ ಕೋಡಿ, ನಾರಣಪ್ಪ ಜತ್ತನ, ಶೇಷಪ್ಪ ಎನ್.ವಿ. ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಹಾಜರಿದ್ದರು.