ಮಡಿಕೇರಿ, ನ. ೧೮: ಕೊಡಗು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಪ್ರತಿಷ್ಠಾಪನಾ ಕಾರ್ಯಕ್ಕೆ ಚಾಲನೆ ನೀಡಿ ವರ್ಷ ಕಳೆದಿದ್ದರೂ ಇಲ್ಲಿಯವರೆಗೆ ಉದ್ದೇಶಿತ ಯೋಜನೆ ಪೂರ್ಣಗೊಂಡಿಲ್ಲವೆAದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕ ಅಸಮಾಧಾನ ವ್ಯಕ್ತಪಡಿಸಿದೆ.

ನಗರದ ಫೀ.ಮಾ. ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನಾ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿದ್ದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಬಿ. ಶಿವಕುಮಾರ್ ಅವರು ಕಾಮಗಾರಿ ಆಮೆ ನಡಿಗೆಯಲ್ಲಿ ಸಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆನ್ನುವ ಬೇಡಿಕೆಯನ್ನು ಮುಂದಿಟ್ಟು ದಲಿತ ಸಂಘರ್ಷ ಸಮಿತಿ ಕಳೆದ ೩೭ ವರ್ಷಗಳಿಂದ ನಿರಂತರ ಹೋರಾಟಗಳನ್ನು ನಡೆಸುತ್ತಾ ಬಂದಿದೆ. ಈ ಹೋರಾಟದ ಫಲವಾಗಿ ಮತ್ತು ನಗರಸಭೆಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಸಿ. ಸತೀಶ್ ಅವರ ಆಸಕ್ತಿಯಿಂದ ೨೦೨೫ ನ.೫ ರಂದು ಜನಪ್ರತಿನಿಧಿಗಳ, ಅಧಿಕಾರಿಗಳ, ದಲಿತ ಮುಖಂಡರ ಹಾಗೂ ಸಮುದಾಯ ಮಂದಿಯ ಸಹಕಾರದಿಂದ ಪ್ರತಿಮೆ ಸ್ಥಾಪನೆಗೆ ಸಂಬAಧಿಸಿದAತೆ ಕಾಮಗಾರಿಯನ್ನು ಆರಂಭಿಸಲಾಯಿತು. ಆದರೆ ಯೋಜನೆ ಆರಂಭಗೊAಡು ವರ್ಷ ಕಳೆದರೂ ಆಡಳಿತ ವ್ಯವಸ್ಥೆಯ ನಿರ್ಲಕ್ಷö್ಯದಿಂದ ಪ್ರತಿಮೆ ಪ್ರತಿಷ್ಠಾಪನೆಗೊಂಡಿಲ್ಲ ತಕ್ಷಣ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪ್ರತಿಮೆ ಪ್ರತಿಷ್ಠಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.