ಮಡಿಕೇರಿ, ನ. ೧೮: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಉಪಾಧ್ಯಕ್ಷರಾಗಿ ಹೊಸೂರು ಜೆ. ಸತೀಶ್ ಕುಮಾರ್ ಅವರು ಮುಂದಿನ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ತನಕ ಉಪಾಧ್ಯಕ್ಷರಾಗಿದ್ದ ಕೇಟೋಳಿರ ಹರೀಶ್ ಪೂವಯ್ಯ ಅವರು ರಾಜಿನಾಮೆ ನೀಡಿದ್ದು ತೆರವಾದ ಸ್ಥಾನಕ್ಕೆ ಇವರು ನೇಮಕಗೊಂಡಿದ್ದಾರೆ.
ಬ್ಯಾಂಕಿನ ನಿರ್ದೇಶಕರಾಗಿ ಸತತ ಮೂರು ಬಾರಿ ಆಯ್ಕೆಯಾಗಿರುವ ಹೊಸೂರು ಜೆ. ಸತೀಶ್ ಕುಮಾರ್ ಅವರನ್ನು ಬ್ಯಾಂಕಿನ ಸರ್ವ ನಿರ್ದೇಶಕರು ಒಮ್ಮತದಿಂದ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದರು.
ಡಿಸಿಸಿ ಬ್ಯಾಂಕ್ನಲ್ಲಿ ಆಯ್ಕೆ ಪ್ರಕ್ರಿಯೆ ನಡೆದ ಸಂದರ್ಭ ಬ್ಯಾಂಕ್ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ನಿರ್ದೇಶಕರುಗಳು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.