ಪೊನ್ನಂಪೇಟೆ, ನ. ೧೮: ೭೧ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪ್ರಿ-ಯೂನಿವರ್ಸಿಟಿ ಕಾಲೇಜಿನಲ್ಲಿ ಜಾನಪದ ವಸ್ತು ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಜಾನಪದ ಕನ್ನಡ ಸಂಸ್ಕೃತಿಯ ಮೂಲವಾಗಿದ್ದು, ನಮ್ಮ ಹಿರಿಯರು ಅನುಸರಿಸಿ ಕೊಂಡು ಬಂದ ಜೀವನಶೈಲಿ, ಆಚಾರ-ವಿಚಾರ, ಸಂಪ್ರದಾಯ, ನಂಬಿಕೆ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿವಿಧ ಜಾನಪದ ವಸ್ತುಗಳನ್ನು ಪ್ರದರ್ಶಿಸುವ ಮೂಲಕ ನಾಡಿನ ಶ್ರೀಮಂತ ಜನಪದ ಸಂಸ್ಕೃತಿ ಮತ್ತು ಪರಂಪರೆಯನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ಚಾಲನೆ ನೀಡಿದರು. ಸ್ಪರ್ಧೆಯ ತೀರ್ಪುಗಾರರಾಗಿ ಭೌತಶಾಸ್ತç ವಿಭಾಗದ ಪ್ರಾಧ್ಯಾಪಕಿ ಪ್ರೊ. ಅನುರಾಧ ಪಿ.ಜೆ., ಗಣಿತಶಾಸ್ತç ವಿಭಾಗದ ಉಪನ್ಯಾಸಕಿ ಲತಾ ಕುಮಾರಿ, ಜೀವಶಾಸ್ತç ವಿಭಾಗದ ಉಪನ್ಯಾಸಕಿ ರಜನಿ ಪೊನ್ನಪ್ಪ ಹಾಗೂ ಲೆಕ್ಕಶಾಸ್ತç ವಿಭಾಗದ ಉಪನ್ಯಾಸಕಿ ನಿರ್ಮಲ ಕಾರ್ಯನಿರ್ವಹಿಸಿದರು. ಕನ್ನಡ ಭಾಷಾ ವಿಭಾಗದ ಉಪನ್ಯಾಸಕರಾದ ಡಾ. ಸುಶ್ಮಿತ ಪಿ.ವಿ. ಹಾಗೂ ನಾಣಯ್ಯ ಕೆ.ಜಿ. ಅವರು ಸ್ಪರ್ಧೆಯ ನೇತೃತ್ವ ವಹಿಸಿದ್ದರು.