ಮಡಿಕೇರಿ, ನ. ೧೮: ಕೊಯವ ಸಮಾಜದ ೨೧ನೇ ಮಹಾಸಭೆ ಮತ್ತು ಕ್ರೀಡಾಕೂಟ ಸಮಾರಂಭ ಮೂರ್ನಾಡಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು ಹಾಗೂ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಯವ ಸಮಾಜದ ಅಧ್ಯಕ್ಷ ಜಿಲ್ಲಂಡ ದಾದು ಮಾದಪ್ಪ, ಸಮಾಜದವರು ವರ್ಷಕ್ಕೊಮ್ಮೆಯಾದರೂ ಒಂದೆಡೆ ಸೇರುವುದರಿಂದ ಪರಸ್ಪರ ವಿಚಾರ ವಿನಿಮಯಕ್ಕೆ ಅವಕಾಶ ದೊರೆಯುವುದರ ಜೊತೆಗೆ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುತ್ತದೆ ಎಂದರು.
ಈಗಾಗಲೇ ಮೂರ್ನಾಡಿನಲ್ಲಿ ಸಮಾಜದ ವತಿಯಿಂದ ಜಾಗ ಖರೀದಿಸಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಮಡಿಕೇರಿ ಶಾಸಕರು ರೂ. ೫ ಲಕ್ಷ ಅನುದಾನ ಮಂಜೂರು ಮಾಡಿದ್ದಾರೆ. ಭೂಮಿಪೂಜೆಯೂ ನೆರವೇರಿಸಲಾಗಿದ್ದು, ಕಟ್ಟಡ ಕಾಮಗಾರಿ ಆರಂಭಿಸುವ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಇನ್ನಷ್ಟು ಅನುದಾನ ಪಡೆಯುವ ನಿರೀಕ್ಷೆಯಿದ್ದು, ಸಂಸದರು ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಮೂಲಕ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಸಮಾಜದ ಉಪಾಧ್ಯಕ್ಷ ಮೇಚಿರ ಡಾ. ಸುಭಾಷ್ ನಾಣಯ್ಯ ಮಾತನಾಡಿ, ಸಮಾಜದ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ ‘ಎ’ಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಶಿಕ್ಷಣ, ಉದ್ಯೋಗ ಹಾಗೂ ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬೇಕು ಯುವಶಕ್ತಿಯು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಸಾಧನೆಯ ಹಾದಿಯಲ್ಲಿ ಸಾಗಬೇಕು ಎಂದರು.
ಸಮಾಜದ ಗೌರವ ಕಾರ್ಯದರ್ಶಿ ತೋರೆರ ಕಾಶಿ ಕಾರ್ಯಪ್ಪ ಅವರು ಸಮಾಜದ ಕಟ್ಟಡ ನಿರ್ಮಾಣದ ಪ್ರಗತಿಯ ಕುರಿತು ಸಭೆಗೆ ಮಾಹಿತಿ ನೀಡಿ, ಕಟ್ಟಡ ನಿರ್ಮಾಣ ಕಾರ್ಯಕ್ಕೆ ಜನಾಂಗದವರು ಉದಾರವಾಗಿ ಧನಸಹಾಯ ನೀಡುವಂತೆ ಮನವಿ ಮಾಡಿದರು.
ಲೇಖಕಿ, ನಟಿ ಹಾಗೂ ಸಿನಿಮಾ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಮಾತನಾಡಿ, ಜಗತ್ತಿನ ಬೇರೆಡೆ ಕಾಣಸಿಗದ ವಿಶಿಷ್ಟ ಸಂಸ್ಕೃತಿ ನಮ್ಮದಾಗಿದೆ. ಇದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಾಜದ ಯುವಜನತೆ ಮುಂದೆ ಬರಬೇಕು ಎಂದರು.
ಇದೇ ಸಂದರ್ಭ ನಿವೃತ್ತ ಯೋಧ ಮುಕ್ಕಾಟಿರ ನಾಣಯ್ಯ ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ನೌಕರರಾದ ನೇಂದುಮAಡ ಸುಜ್ಯೋತಿ ಪ್ರಕಾಶ್ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಸಭೆಯಲ್ಲಿ ಕಳೆದ ಮಹಾಸಭೆಯ ವರದಿಗೆ ಅಂಗೀಕಾರ ಪಡೆಯಲಾಯಿತು. ಗೌರವ ಕಾರ್ಯದರ್ಶಿ ತೋರೆರ ಕಾಶಿ ಕಾರ್ಯಪ್ಪ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಆಡಳಿತ ಮಂಡಳಿಯ ವರದಿಯನ್ನು ಪುದಿಯೊಕ್ಕಡ ರೆಮಿತ ಸುಜಯ್ ವಾಚಿಸಿದರು.
೧೦ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ತೋರೆರ ಮೋನಿಶ್ ಮುತ್ತಣ್ಣ, ಕಳ್ಳಿರ ಚೋಂದಮ್ಮ, ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮಲ್ಲಂಡ ಇಳಾ ತಂಗಮ್ಮ ಹಾಗೂ ಪದವಿ ವಿಭಾಗದಲ್ಲಿ ಸಾಧನೆ ಮಾಡಿದ ಈರಮಂಡÀ ಕೇಸರಿ ಭೋಜಮ್ಮ ಅವರಿಗೆ ಸಮಾಜದ ದತ್ತಿನಿಧಿಯಿಂದ ಪ್ರೋತ್ಸಾಹಧನ ಮತ್ತು ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
ಮಧ್ಯಾಹ್ನ ಮೂರ್ನಾಡಿನ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟವನ್ನು ಸಿಆರ್ಪಿಎಫ್ ಅಧಿಕಾರಿ ಅಮ್ಮಚಾಳಿಯಂಡ ಮುತ್ತಣ್ಣ ಉದ್ಘಾಟಿಸಿದರು. ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕೊಡವ ಪಾಟ್ ಮತ್ತು ವಾಲಗತ್ತಾಟ್ ಸ್ಪರ್ಧೆಗಳು ಗಮನ ಸೆಳೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.
ಕಾಂಞAಗಡ ಸುಬ್ಬಯ್ಯ ನಿರೂಪಿಸಿ, ಮೇಚುರ ರವಿಶಂಕರ್ ಪ್ರಾರ್ಥಿಸಿ, ಕಳ್ಳಿರ ನಾಣಯ್ಯ ವಂದಿಸಿದರು. ಮಲ್ಲಂಡ ಮಹೇಶ್, ಈರಮಂಡ ವಿಜಯ್, ಮೇಚಿರ ಹರೀಶ್, ನೇಂದುಮAಡ ಗೀತಾ ನಾಣಯ್ಯ, ಈರಮಂಡ ದಮಯಂತಿ ಮತ್ತಿತರರು ಉಪಸ್ಥಿತರಿದ್ದರು.