ಮಡಿಕೇರಿ, ನ. ೧೮: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ತಾ. ೨೧ ರಿಂದ ೨೩ ರವರೆಗೆ ವಾರ್ಷಿಕ ಕ್ರೀಡಾಕೂಟ-೨೦೨೬ ನಗರದ ಕೊಡಗು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.
ತಾ. ೨೧ ರಂದು ಬೆಳಗ್ಗೆ ೯ ಗಂಟೆಗೆ ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ತಾ. ೨೩ ರಂದು ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮೈಸೂರಿನ ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕರಾದ
೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಡಾ.ಬೋರಲಿಂಗಯ್ಯ ಎಂ.ಬಿ. ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.