ಕೂಡಿಗೆ, ನ.೧೯: ೭೩ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ತಾ.೨೦ರಂದು (ಇಂದು) ತೊರೆನೂರು ನೀರು ಬಳಕೆದಾರರ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಲಾಗಿದೆ.
ಜಲ ಸಂಪನ್ಮೂಲ ಇಲಾಖೆ, ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆ ಹಾರಂಗಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳ ಹಾಗೂ ತೊರೆನೂರು ನೀರು ಬಳಕೆದಾರರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ತೊರೆನೂರು ವಿರಕ್ತಮಠದ ಶ್ರೀ ಮಲ್ಲೇಶಸ್ವಾಮಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಧಾರವಾಡದ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ನಿರ್ದೇಶಕ ಡಾ. ಗಿರೀಶ್ ಎನ್. ಮರಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಹಾರಂಗಿ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘಗಳ ಮಹಾಮಂಡಳದ ಅಧ್ಯಕ್ಷ ಎಸ್.ಸಿ. ಚೌಡೇಗೌಡ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತೊರೆನೂರು ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಟಿ.ಕೆ. ಪಾಂಡುರAಗ ತಿಳಿಸಿದ್ದಾರೆ.