ಕೆ.ಎಂ ಇಸ್ಮಾಯಿಲ್ ಕಂಡಕರೆ

ಮಡಿಕೇರಿ, ನ. ೧೯: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಫಾರಂ-೭ ದುರ್ಬಳಕೆ ಮಾಡಿಕೊಂಡು ಮತದಾರರ ಹೆಸರು ಅಳಿಸಲು ಯತ್ನಿಸಿದ ಆರೋಪಕ್ಕೆ ಸಂಬAಧಿಸಿದAತೆ ಕೊಡಗು ಜಿಲ್ಲೆಯ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಭಾಗದ ಬ್ಯಾಡಗೊಟ್ಟ ಬಿಜೆಪಿ ಬೂತ್ ಮಟ್ಟದ ಏಜೆಂಟ್‌ಗಳಾದ ಯು.ಎಚ್ ಲೋಕೇಶ್, ರಜಿನಿ, ನಾಗರಾಜ್ ಎ.ಸಿ., ಸವಿತಾ ಮಲಳಿ, ಮತ್ತು ಬಸವರಾಜು ಬಿ.ಎನ್. ವಿರುದ್ಧ ಶನಿವಾರಸಂತೆ ಠಾಣೆಯಲ್ಲಿ ಬ್ಯಾಡಗೊಟ್ಟ ನಿವಾಸಿ ಸಫ್ವಾನ್ ಅವರು ದೂರು ದಾಖಲಿಸಿದ್ದರು.ಈ ಸಂಬAಧ ಅ.೫ ರಂದು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಎಸ್‌ಐಆರ್ ಪ್ರಕ್ರಿಯೆ ವೇಳೆ ಬ್ಯಾಡಗೊಟ್ಟ ಗ್ರಾಮದ ೬೪ ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡುವಂತೆ ಫಾರಂ-೭ ಮೂಲಕ ಬ್ಯಾಡಗೊಟ್ಟ ಬಿಎಲ್‌ಓ ಅವರಿಗೆ ಅರ್ಜಿ ಸಲ್ಲಿಸಲಾಗಿತ್ತು. ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ಏಕಸದಸ್ಯ ನ್ಯಾಯಪೀಠ, ನವೆಂಬರ್ ೧೭ರಂದು ತನಿಖೆಗೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ನವೆಂಬರ್ ೨೪ಕ್ಕೆ ಮುಂದೂಡಿದೆ.

ಫಾರA-೭ ಮೂಲಕ ಮತದಾರರ ಹೆಸರುಗಳನ್ನು ಅಳಿಸಲು ಯತ್ನಿಸಿದ್ದಾರೆ ಎಂಬುದು ದೂರಿನಲ್ಲಿರುವ ಆರೋಪ. ಈ ಕುರಿತು ಚುನಾವಣಾ ಅಧಿಕಾರಿಗಳೇ ಮೊದಲು ವಿಚಾರಣೆ ನಡೆಸಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಫಾರಂ-೭ಗೆ ಸಂಬAಧಿಸಿದAತೆ ಕೈಗೊಂಡ ನಿರ್ಧಾರಗಳ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ, ಮತದಾರರ ನೋಂದಣಿ ಅಧಿಕಾರಿಗಳಿಗೆ ನ್ಯಾಯಪೀಠ ಸೂಚಿಸಿದೆ. ಮತದಾರರ ನೋಂದಣಿ ನಿಯಮಗಳು-೧೯೬೦ರ ಅಡಿಯಲ್ಲಿ ಅರ್ಜಿಗಳ ಸ್ವರೂಪ ಕುರಿತು ನಡೆಯಬೇಕಿರುವ ವಾಸ್ತವದ ವಿಚಾರಣೆ ಮೊದಲು ಪೂರ್ಣಗೊಳಿಸಬೇಕು ಎಂದೂ ಅಭಿಪ್ರಾಯಪಟ್ಟಿದೆ.

ಮತದಾರರ ನೋಂದಣಿ ನಿಯಮಗಳು-೧೯೬೦ರ ನಿಯಮ ೧೫ರಿಂದ ೨೩ರವರೆಗೆ ಇರುವ ನಿಬಂಧನೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಆಕ್ಷೇಪಣೆಗೆ ಸಂಬAಧಿಸಿದAತೆ ಆಕ್ಷೇಪಣೆಗಳ ಪರಿಶೀಲನೆ, ವಿಚಾರಣೆ, ಸಂಬAಧಪಟ್ಟ ವ್ಯಕ್ತಿಗಳಿಗೆ ವಿಚಾರಣೆ ಅವಕಾಶ ಹಾಗೂ ಚುನಾವಣಾಧಿಕಾರಿಗೆ ಸ್ವಯಂಪ್ರೇರಿತವಾಗಿ ಸಮಗ್ರ ಪ್ರಕ್ರಿಯೆಯನ್ನು ರೂಪಿಸಲಾಗಿದೆ. ಮೇಲಿನ ನಿಬಂಧನೆಗಳನ್ನು ಗಮನಿಸಿದರೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ಅಳಿಸುವಿಕೆಗೆ ಸಂಬAಧಿಸಿದAತೆ ಯಾವುದಾದರೂ ವ್ಯವಸ್ಥೆ ರೂಪಿಸಿರುವುದು ಸ್ಪಷ್ಟವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಜತೆಗೆ, ಜನಪ್ರತಿನಿಧಿ ಕಾಯ್ದೆ-೧೯೫೦ರ ಸೆಕ್ಷನ್ ೩೧ ಅನ್ನು ಉಲ್ಲೇಖಿಸಿದ ನ್ಯಾಯಪೀಠ, ಮತದಾರರ ಪಟ್ಟಿಯ ಸಿದ್ಧತೆ, ಪರಿಷ್ಕರಣೆ ಅಥವಾ ತಿದ್ದುಪಡಿಗೆ ಸಂಬAಧಿಸಿದAತೆ ಉದ್ದೇಶಪೂರ್ವಕವಾಗಿ ಸುಳ್ಳು ಘೋಷಣೆ ಸಲ್ಲಿಸುವುದು ಅಥವಾ ಸುಳ್ಳು ದಾಖಲೆ / ಅರ್ಜಿ ನೀಡುವುದು ಅಪರಾಧವಾಗಿದೆ ಎಂದು ಹೇಳಿದೆ. ಫಾರಂ-೭ರ ಅಡಿಯಲ್ಲಿ ಸಲ್ಲಿಸಲಾದ ಮಾಹಿತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಸುಳ್ಳು ಮಾಹಿತಿ ನೀಡಿದಲ್ಲಿ ದಂಡನಾತ್ಮಕ ಕ್ರಮ ಕೈಗೊಳ್ಳಲು ೧೯೬೦ರ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.