ಚೆಯ್ಯಂಡಾಣೆ, ನ.೧೯: ಸ್ವಚ್ಛ ಹಾಗೂ ಸುಂದರ ಗ್ರಾಮ ನಿರ್ಮಾಣದ ಉದ್ದೇಶ ದಿಂದ ನರಿಯಂದಡ ಗ್ರಾಮ ಪಂಚಾಯಿತಿ ಮತ್ತು ಸಂಜೀವಿನಿ ಒಕ್ಕೂಟದ ಜಂಟಿ ಸಹಯೋಗದಲ್ಲಿ ಕಡಂಗದಿAದ ಚೆಯ್ಯಂಡಾಣೆವರೆಗೆ ಹಮ್ಮಿಕೊಳ್ಳಲಾಗಿದ್ದ ಸಂಪೂರ್ಣ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಿ ನಡೆಯಿತು.

ಸಂಜೀವಿನಿ ಒಕ್ಕೂಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಕಡಂಗದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಡಂಗದಿAದ ಚೆಯ್ಯಂಡಾಣೆಯವರೆಗಿನ ಮುಖ್ಯರಸ್ತೆಯ ಎರಡೂ ಬದಿಗಳಲ್ಲಿ ಸಂಗ್ರಹವಾಗಿದ್ದ ಕಸ ಹಾಗೂ ತ್ಯಾಜ್ಯಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.

ಸ್ಥಳೀಯ ಸಂಘ-ಸAಸ್ಥೆಗಳು, ಸಾರ್ವ ಜನಿಕರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಅಭಿಯಾನದಲ್ಲಿ ಪಾಲ್ಗೊಂಡರು. ವಿವಿಧ ಸಂಘಟನೆಗಳ ಸದಸ್ಯರು ಒಗ್ಗಟ್ಟಿನಿಂದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಪರಿಸರ ಸಂರಕ್ಷಣೆಯ ಸಾಮಾಜಿಕ ಜವಾಬ್ದಾರಿ ಮೆರೆದರು.

ಪೊದ್ದಮಾನಿ ಮಂದ್ ಟ್ರಸ್ಟ್ ವತಿಯಿಂದ ಕರಡ ಹಾಗೂ ಪೊದವಾಡ ವಾರ್ಡ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಸಹಕಾರ ನೀಡಲಾಯಿತು. ಚೆಯ್ಯಂಡಾಣೆ ಭಾಗದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಅವರ ನೇತೃತ್ವದಲ್ಲಿ ಅಂಗಡಿ-ಮುAಗಟ್ಟುಗಳು ಹಾಗೂ ರಸ್ತೆ ಬದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಕಸ ಎಸೆದರೆ ದಂಡದ ಎಚ್ಚರಿಕೆ

ಅಭಿಯಾನದ ಸಂದರ್ಭ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಾರ್ವಜನಿಕರಿಗೆ ಕಸ ವಿಲೇವಾರಿ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿದರು. ಮನೆ ಹಾಗೂ ಅಂಗಡಿಗಳಲ್ಲಿ ಸಂಗ್ರಹವಾಗುವ ಒಣಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಸ್ವಚ್ಛವಾಹಿನಿಗೆ ಹಸ್ತಾಂತರಿಸುವ ಮೂಲಕ ಪಂಚಾಯಿತಿಯೊAದಿಗೆ ಸಹಕರಿಸುವಂತೆ ಮನವಿ ಮಾಡಿದರು.

ಅಂಗಡಿ-ಮುAಗಟ್ಟುಗಳ ತ್ಯಾಜ್ಯವನ್ನು ರಸ್ತೆ ಬದಿಗಳಲ್ಲಿ ಹಾಗೂ ಮನೆಗಳ ಕಸವನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯುವವರ ವಿರುದ್ಧ ಇನ್ನು ಮುಂದೆ ದಂಡ ವಿಧಿಸುವುದರೊಂದಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿ ನೋಟೀಸ್ ಜಾರಿಗೊಳಿಸಲಾಯಿತು.

ಸ್ವಚ್ಛತಾ ಅಭಿಯಾನ ಒಂದು ದಿನಕ್ಕೆ ಸೀಮಿತವಾಗದೆ ನಿರಂತರವಾಗಿ ಮುಂದುವರಿಯಬೇಕು. ಸಾರ್ವಜನಿಕರು ತಮ್ಮ ಮನೆ, ಅಂಗಡಿ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಗ್ರಾಮ ಪಂಚಾಯಿತಿಯೊAದಿಗೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಮಾಜಿ ಸದಸ್ಯರಾದ ಸುಬೈರ್, ವಿಲಿನ್, ಮಮ್ಮದ್, ರಾಣಿ ಗಣಪತಿ, ಸಂಜೀವಿನಿ ಒಕ್ಕೂಟದ ಎಂಬಿಕೆ ವಸಂತಿ, ಕೃಷಿ ಸಖಿ ಅಂಬಿಕಾ, ಎಲ್‌ಸಿಆರ್‌ಪಿ ನಳಿನಿ, ಪಶು ಸಖಿ ಮೀನಾಕ್ಷಿ, ಸಿಆರ್‌ಪಿಇಪಿ ಭವ್ಯ, ಒಕ್ಕೂಟದ ಅಧ್ಯಕ್ಷೆ ರಮ್ಯ, ಸದಸ್ಯೆ ಕವಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದು ಅಭಿಯಾನದಲ್ಲಿ ಕೈಜೋಡಿಸಿದರು.

ಸ್ವಚ್ಛ ಗ್ರಾಮ ನಿರ್ಮಾಣ ಪಂಚಾಯಿತಿಯೊAದರ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು ಎಂಬ ಸಂದೇಶವನ್ನು ಅಭಿಯಾನ ಸಾರಿತು.

- ಅಶ್ರಫ್