ಐಗೂರು, ನ. ೧೯: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಿರುಗಂದೂರು ಗ್ರಾಮದ ಕೋವೇರ ಮಹೇಶ್ ತಿಮ್ಮಯ್ಯ ಅವರು ರಾಜ್ಯಮಟ್ಟದ ಕವನ ರಚನಾ ಸ್ಪರ್ಧೆಯಲ್ಲಿ ವಿಜೇತರಾಗಿ ಕರ್ನಾಟಕ ಕಾವ್ಯಶ್ರೀ ೨೦೨೬ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ ಜಿಲ್ಲಾ ಘಟಕ ಬೆಂಗಳೂರು ಗ್ರಾಮಾಂತರ ಹಾಗೂ ಜಿಲ್ಲಾ ಘಟಕ ತುಮಕೂರು ಇವರ ಸಯುಕ್ತ ಆಶ್ರಯದಲ್ಲಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಕವನ ರಚನಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿ ಭಾಗವಹಿಸಿದ್ದ ಕೋವೇರ ಮಹೇಶ್ ತಿಮ್ಮಯ್ಯ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ.
ನವೆಂಬರ್ ೧೫ ರಂದು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರ್ನಾಟಕ ವೈಭವ ಕಾರ್ಯಕ್ರಮದಲ್ಲಿ ಅವರಿಗೆ ಕಾವ್ಯಶ್ರೀ- ೨೦೨೬ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.