ಮಡಿಕೇರಿ, ನ. ೧೯: ಸಂಘ ಪರಿವಾರದ ಮುಖಂಡರಾಗಿದ್ದ ಆರ್.ಎಸ್.ಎಸ್.ನ ಜಿಲ್ಲಾ ಸಂಘಚಾಲಕರಾಗಿದ್ದ ಚೆಕ್ಕೇರ ಮನು ಕಾವೇರಪ್ಪ (೬೪) ಅವರು ತಾ. ೧೯ರ ಗುರುವಾರದಂದು ಹೃದಯಾಘಾತದಿಂದ ನಿಧನರಾದರು.

ಕಳೆದ ೪೫ ವರ್ಷಗಳಿಂದ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಇವರು ಹಲವು ಸಂಘ ಸಂಸ್ಥೆಗಳಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡಿದ್ದರು. ವನವಾಸಿ ಕಲ್ಯಾಣದ ರಾಜ್ಯಾಧ್ಯಕ್ಷರಾಗಿಯೂ ಇವರು ಕಾರ್ಯ ನಿರ್ವಹಿಸುತ್ತಿದ್ದರು. ೪ಏಳನೇ ಪುಟಕ್ಕೆ

(ಮೊದಲ ಪುಟದಿಂದ) ತಿತಿಮತಿ ದೇವರಪುರ ನಿವಾಸಿಯಾಗಿದ್ದ ಮನು ಕಾವೇರಪ್ಪ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇಂದು ಅಮ್ಮತ್ತಿಯಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಇವರು ಅಪರಾಹ್ನ ತಮ್ಮ ಕುಟುಂಬ ಸ್ನೇಹಿತರೊಬ್ಬರ ಮನೆಗೆ ತೆರಳಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದಾರೆ.

ತಾ. ೨೦ ರಂದು (ಇಂದು) ಅಪರಾಹ್ನ ೨ಕ್ಕೆ ದೇವರಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸಂತಾಪ

ಮನು ಕಾವೇರಪ್ಪ ಅವರ ನಿಧನಕ್ಕೆ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಮಾಜಿ ಎಂಎಲ್‌ಸಿ ಎಂ.ಪಿ. ಸುನಿಲ್ ಸುಬ್ರಮಣಿ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ರಾಜ್ಯ ಬಿಜೆಪಿ ಶಿಸ್ತು ಸಮಿತಿ ಸದಸ್ಯೆ ಪಟ್ಟಡ ರೀನಾ ಪ್ರಕಾಶ್, ಭಾರತೀಯ ಮಸ್ದೂರ್ ಸಂಘದ ಜಿಲ್ಲಾಧ್ಯಕ್ಷ ಸೂದನ ಸತೀಶ್, ಜಿಲ್ಲಾ ಕಾರ್ಯದರ್ಶಿ, ಮಂಡಳಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಪ್ರತಿಭಟನೆ ಮುಂದೂಡಿಕೆ

ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ತಾ. ೨೦ ರಂದು (ಇಂದು) ವೀರಾಜಪೇಟೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ಜನಜಾಗೃತಿ ಜಾಥಾವನ್ನು ಮುಂದೂಡಲಾಗಿದೆ. ಆರ್‌ಎಸ್‌ಎಸ್ ಸರಸಂಘ ಚಾಲಕರಾಗಿದ್ದ ಚೆಕ್ಕೆರ ಮನು ಕಾವೇರಪ್ಪ ಅವರ ನಿಧನದ ಹಿನ್ನೆಲೆ ಪ್ರತಿಭಟನೆ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಬಿಜೆಪಿ ತಿಳಿಸಿದೆ.