ಕುಶಾಲನಗರ, ನ. ೧೯: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಹಾಗೂ ಆತ್ಮಸ್ಥೆöÊರ್ಯ ತುಂಬುವ ಕಾರ್ಯವಾಗಬೇಕು ಎಂದು ಸ್ತಿçÃಶಕ್ತಿ ಒಕ್ಕೂಟದ ರಾಜ್ಯಾಧ್ಯಕ್ಷೆ ರೆಹನಾ ಸುಲ್ತಾನ ಹೇಳಿದರು.

ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನೆ ಹಾಗೂ ಸ್ತ್ರೀಶಕ್ತಿ ಒಕ್ಕೂಟದ ಸಹಯೋಗದಲ್ಲಿ ಕುಶಾಲನಗರದ ವಾತ್ಸಲ್ಯ ಶಿಶುಪಾಲನಾ ಕೇಂದ್ರ ಮತ್ತು ಅಂಗನವಾಡಿಗಳ ವತಿಯಿಂದ ಎಪಿಸಿಎಂಎಸ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಇಂತಹ ವೇದಿಕೆಗಳು ಸಹಕಾರಿಯಾಗಿವೆ. ಮಕ್ಕಳಲ್ಲಿ ದೇಶಪ್ರೇಮ, ಪರಸ್ಪರ ಬಾಂಧವ್ಯ ಹಾಗೂ ಆತ್ಮಸ್ಥೈರ್ಯ ಬೆಳೆಸುವ ಉದ್ದೇಶದಿಂದ ಇಲಾಖೆಯ ವತಿಯಿಂದ ಪ್ರತಿವರ್ಷ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸೋಮವಾರಪೇಟೆ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಬಿ. ಮುಧೋಳ, ಮಕ್ಕಳಿಗೆ ಗೌರವ, ಪ್ರೀತಿ ಮತ್ತು ಆದರ ತೋರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಹಿಳೆಯರು ಹಾಗೂ ಮಕ್ಕಳಿಗಾಗಿ ಸರ್ಕಾರ ರೂಪಿಸಿರುವ ಇಲಾಖಾ ಕಾರ್ಯಕ್ರಮ ಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಎಲ್ಲರೂ ಪರಸ್ಪರ ಸಹಕಾರ ಮತ್ತು ಹೊಂದಾಣಿಕೆಯಿAದ ಮಕ್ಕಳ ಅಭ್ಯುದಯಕ್ಕೆ ಶ್ರಮಿಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿದರು.

ತಾಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಎಚ್.ಎಂ. ಹೇಮ, ಉಪಾಧ್ಯಕ್ಷೆ ಯಶೋಧ, ಮಡಿಕೇರಿ ತಾಲೂಕು ಕಾರ್ಯದರ್ಶಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ತಾಲೂಕು ಮೇಲ್ವಿಚಾರಕಿ ಸಾವಿತ್ರಮ್ಮ, ಸ್ತ್ರೀಶಕ್ತಿ ಒಕ್ಕೂಟದ ಪದಾಧಿಕಾರಿಗಳು, ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು, ವಾತ್ಸಲ್ಯ ಶಿಶುಪಾಲನಾ ಕೇಂದ್ರದ ಶಿಕ್ಷಕಿ ರಂಜಿತಾ, ಸಿಬ್ಬಂದಿಗಳಾದ ಅಭಿಲಾಷ, ಗ್ರೀಷ್ಮಾ ಸೇರಿದಂತೆ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಇದೇ ಸಂದರ್ಭ ಮಕ್ಕಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.