ಸಿದ್ದಾಪುರ, ನ. ೧೯: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಸಿಪಿಐಎಂ ಪಕ್ಷದ ವತಿಯಿಂದ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಕಾರ್ಮಿಕ ಮುಖಂಡ ಎನ್.ಡಿ. ಕುಟ್ಟಪ್ಪ, ರಾಜ್ಯ ಸರ್ಕಾರವು ಇತ್ತೀಚೆಗೆ ಸರ್ಕಾರಿ ಬಸ್ಸಿನ ಪ್ರಯಾಣದ ದರ ಹಾಗೂ ಹಾಲಿನ ದರ ಏರಿಕೆ ಮಾಡಿದ ಹಿನ್ನೆಲೆ ಜನಸಾಮಾನ್ಯರಿಗೆ, ಮಧ್ಯಮ ವರ್ಗದವರಿಗೆ ಸಮಸ್ಯೆಯಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರಿಗೆ ಕನಿಷ್ಟ ವೇತನ ನೀಡುವಲ್ಲಿ ಆಸಕ್ತಿ ವಹಿಸುತ್ತಿಲ್ಲ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಸಿಪಿಐಎಂ ಪಕ್ಷದ ಪದಾಧಿಕಾರಿಗಳಾದ ಹೆಚ್.ಬಿ. ರಮೇಶ್, ಭರತ್, ಎನ್.ಕೆ. ಅನಿಲ್ ಇನ್ನಿತರರು ಹಾಜರಿದ್ದರು.