ಮಡಿಕೇರಿ ನ. ೧೯: ಮಕ್ಕಳಿಗೆ ಅವರ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಅವಕಾಶ ಕಲ್ಪಿಸಬೇಕು. ಅವರನ್ನು ದುಡಿಮೆಗೆ ದೂಡದೆ ಶಿಕ್ಷಣ ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ನಿರ್ಮಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಹಾಗೂ ಸಾರ್ವಜನಿಕರು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಅಂತರಾಷ್ಟಿçÃಯ ಕಾರ್ಮಿಕ ಸಂಸ್ಥೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತ ಆಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ಕೃಷಿ ಕ್ಷೇತ್ರದಲ್ಲಿ ಬಾಲಕಾರ್ಮಿಕರ ಸ್ಥಿತಿ, ವಲಸೆ ಕುಟುಂಬಗಳ ಸಮಸ್ಯೆಗಳು ಹಾಗೂ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ತಿದ್ದುಪಡಿ ಕಾಯ್ದೆ ೨೦೧೬ರ ಕುರಿತು ಇಲಾಖಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಂಬAಧಪಟ್ಟ ಇಲಾಖೆಗಳು ನಿರಂತರವಾಗಿ ಕಾರ್ಯನಿರ್ವಹಿಸಬೇಕು
‘ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಸಹ ಅದನ್ನು ಸೃಷ್ಟಿಸಿರುವುದು ಮನುಷ್ಯನೇ. ಮನುಷ್ಯನ ಬುದ್ಧಿಶಕ್ತಿಗಿಂತ ತಂತ್ರಜ್ಞಾನ ದೊಡ್ಡದಲ್ಲ. ತಂತ್ರಜ್ಞಾನವನ್ನು ಮರೆಮಾಚಿ ಅಥವಾ ಅದರ ಲೋಪದೋಷಗಳನ್ನು ಬಳಸಿಕೊಂಡು ತಪ್ಪು ಚಟುವಟಿಕೆಗಳು ನಡೆಯುವ ಸಾಧ್ಯತೆಗಳೂ ಇವೆ. ಆದ್ದರಿಂದ ತಂತ್ರಜ್ಞಾನವನ್ನೇ ಸಂಪೂರ್ಣವಾಗಿ ಅವಲಂಬಿಸದೆ, ನೇರ ಪರಿಶೀಲನೆ ಮತ್ತು ಮಾನವೀಯ ಕಾಳಜಿಗೂ ಆದ್ಯತೆ ನೀಡಬೇಕು.
ಸಮಾಜದಲ್ಲಿ ಬದಲಾವಣೆ ತರುವುದು ಒಬ್ಬರಿಂದ ಮಾತ್ರ ಸಾಧ್ಯವಿಲ್ಲ. ಪ್ರತಿಯೊಬ್ಬರೂ ತಮ್ಮ ಕೈಲಾದಷ್ಟು ಸಣ್ಣಪುಟ್ಟ ಪ್ರಯತ್ನ ಮಾಡುವ ಮೂಲಕ ದೊಡ್ಡ ಬದಲಾವಣೆಗೆ ನಾಂದಿ ಹಾಡಬಹುದು. ಎಲ್ಲರ ಸಹಕಾರ ಮತ್ತು ಸಂಘಟಿತ ಪ್ರಯತ್ನದಿಂದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸೇರಿದಂತೆ ಸಾಮಾಜಿಕ ಸುಧಾರಣೆಯ ಕಾರ್ಯಗಳಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಅವರು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷಿö್ಮ ರಾಯಕೋಡ ಮಾತನಾಡಿ, ಕಾರ್ಮಿಕರ ಹಕ್ಕುಗಳು ಮತ್ತು ಕಾರ್ಮಿಕರ ಸಮಸ್ಯೆಗಳ ವಿಚಾರದಲ್ಲಿ ಎಚ್ಚರವಹಿಸಬೇಕು. ಎಲ್ಲರನ್ನೂ ಸಮಾನವಾಗಿ ಕಾಣಬೇಕು.
ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆ ಸಮಾಜದ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಮಕ್ಕಳಿಂದ ದುಡಿಮೆ ಮಾಡಿಸುವ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲರೂ ಸಂಕಲ್ಪ ಮಾಡಬೇಕು. ಮಕ್ಕಳಿಗೆ ಶಿಕ್ಷಣ, ಉತ್ತಮ ಭವಿಷ್ಯ ಹಾಗೂ ಗೌರವಯುತ ಬದುಕು ಕಲ್ಪಿಸುವ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಅಂರ್ರಾಷ್ಟಿçÃಯ ಕಾರ್ಮಿಕ ಸಂಸ್ಥೆ, ಚೈಲ್ಡ್ ಲೇಬರ್ ಪ್ಲಾಟ್ ಫಾರಂ, ರಾಷ್ಟಿçÃಯ ಯೋಜನಾ ಸಂಯೋಜಕರಾದ ರಂಜಿತ್ ಪ್ರಕಾಶ್ ಮಾತನಾಡಿ, ಮಕ್ಕಳ ಸಮಗ್ರ ಅಭಿವೃದ್ಧಿ ಹಾಗೂ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಉದ್ದೇಶದಿಂದ ಸರ್ಕಾರ ಮತ್ತು ಅಂತರರಾಷ್ಟಿçÃಯ ಕಾರ್ಮಿಕ ಸಂಸ್ಥೆ ಸಹಯೋಗದಲ್ಲಿ ‘ಚೈಲ್ಡ್ ಡೆವಲಪ್ಮೆಂಟ್ ಪ್ಲಾಟ್ಫಾರ್ಮ್ ಪ್ರೋಗ್ರಾಂ’ ಎಂಬ ನೂತನ ಕಾರ್ಯಕ್ರಮವನ್ನು ರಾಜ್ಯದಲ್ಲಿ ಆರಂಭಿಸಲಾಗಿದೆ ಎಂದರು.
ರಾಜ್ಯದ ಐದು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಕೊಡಗು ಜಿಲ್ಲೆಯೂ ಯೋಜನೆಗೆ ಆಯ್ಕೆಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆ, ಬಾಲಕಾರ್ಮಿಕ ಪದ್ಧತಿ ತಡೆ ಹಾಗೂ ಮಕ್ಕಳಿಗೆ ಶಿಕ್ಷಣ ಮತ್ತು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ಕಲ್ಪಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಯೋಗೇಶ್ ಮಾತನಾಡಿ, ಮಕ್ಕಳ ರಕ್ಷಣೆಯಲ್ಲಿ ಶಿಕ್ಷಣ ಇಲಾಖೆಯ ಪಾತ್ರ ಪ್ರಮುಖ. ಕೊಡಗು ಸಾಂಸ್ಕೃತಿಕವಾಗಿ, ವೈಜ್ಞಾನಿಕವಾಗಿ, ವೈಚಾರಿಕವಾಗಿ ಶ್ರೀಮಂತ ಜಿಲ್ಲೆಯಾಗಿದ್ದು, ಫೋಕ್ಸೊ ಪ್ರಕರಣಗಳ ಕುರಿತು ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಎಂ.ಎA.ಯತ್ನಟ್ಟಿ ಮಾತನಾಡಿ, ಶಿಕ್ಷಣ ವಂಚಿತ ಹಾಗೂ ದಾರಿತಪ್ಪಿ ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಿದೆ ಎಂದರು.
ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಾಯಕ ಸಬ್ ಇನ್ಸ್ಪೆಕ್ಟರ್ ಸಮತಿ ಮಾತನಾಡಿ, ಮಕ್ಕಳು ಶಾಲೆಯಿಂದ ಹೊರಗುಳಿದರೆ ಏನಾಗುತ್ತದೆ ಎಂಬುದರ ಕುರಿತು ಜಾಗೃತಿ ಮೂಡಿಸಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ವಿ.ಅಂಬಿಕಾ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೊಡಗು ಜಿ.ಪಂ. ಸಿಇಒ ದಿನೇಶ್ ಕುಮಾರ್ ಮೀನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಡಿ.ಆರ್.ಪ್ರಸನ್ನ ಕುಮಾರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಯೋಜನಾ ಸಮನ್ವಯಾಧಿಕಾರಿ ಎಚ್.ಸಿ.ಭಾಗೀರತಿ, ಪ್ರಮುಖರಾದ ಕುಡಿಯರ ಮುತ್ತಪ್ಪ, ಬಿ.ಆರ್. ಭರತ್, ನಿರ್ವಾಹಣಪ್ಪ, ಸರೋಜಿನಿ, ಇಲಾಖಾಧಿಕಾರಿಗಳು ಇದ್ದರು.
ಕೊಡಗು ವಿದ್ಯಾಲಯದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿಯರು ನಾಡಗೀತೆ, ವಂದೇ ಮಾತರಂ ಗೀತೆ ಹಾಡಿದರು. ಯಶೋಧ ಪ್ರಾರ್ಥಿಸಿದರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿದರು, ಸೋಮವಾರಪೇಟೆ-ವೀರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ಶ್ರೀಧರ್ ಸ್ವಾಗತಿಸಿದರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕರಾದ ಆರ್. ಶೀರಾಝ್ ಅಹ್ಮದ್ ವಂದಿಸಿದರು.