ಮಡಿಕೇರಿ, ನ. ೧೯: ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಲಭ್ಯವಿರುವ ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಡಿಕೇರಿಯ ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸುವಂತೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ನ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ.
ಜಿಲ್ಲಾಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ ಎಸ್ಡಿಟಿಯುನ ಜಿಲ್ಲಾ ಕಾರ್ಯದರ್ಶಿ ಎಂ.ಎ. ಅಬ್ದುಲ್ ರಜಾ಼ಕ್ ಅವರು ಇತ್ತೀಚಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ಇದ್ದರೂ ರೋಗಿಗಳಿಂದ ಶುಲ್ಕ ಪಡೆಯಲಾಗುತ್ತಿದೆ ಎನ್ನುವ ಆರೋಪಗಳಿವೆ ಎಂದು ಗಮನ ಸೆಳೆದರು.
ಆದ್ದರಿಂದ ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಸ್ಪಷ್ಟ ಮಾಹಿತಿ ನೀಡಬೇಕು. ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಾಹಿತಿ ಫಲಕ ಅಳವಡಿಸಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ಸಂದರ್ಭ ಎಸ್ಡಿಟಿಯುನ ಜಿಲ್ಲಾ ಸಮಿತಿಯ ಸದಸ್ಯರಾದ ಹಸೀನ ಹಾಗೂ ಮೊಹಿದ್ದೀನ್ ಹಾಜರಿದ್ದರು.