ಮಡಿಕೇರಿ, ನ. ೧೯: ದೇವಣಗೇರಿ ಬಿಸಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಅಮ್ಮತ್ತಿ ಲಯನ್ಸ್ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಉಚಿತವಾಗಿ ಕಂಪ್ಯೂಟರ್ ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಆಡಳಿತ ಮಂಡಳಿಯ ಉಪಾಧ್ಯಕ್ಷ ಚೇಂದAಡ ಜಿ. ಪೊನ್ನಪ್ಪ ಮಾತನಾಡಿ, ಲಯನ್ಸ್ ಸಂಸ್ಥೆಯವರ ಈ ಕೊಡುಗೆ ನಮ್ಮ ಶಾಲೆಗೆ ವಿದ್ಯಾರ್ಜನೆಗೆ ಸಹಾಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಪೊರ್ಕೊಂಡ ಬೋಪಣ್ಣ ಮಾತನಾಡಿ, ಶಾಲೆಯ ಸರ್ವಾಂಗೀಣ ಅಭಿವೃದ್ಧಿಯನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿ ಶೇ. ೧೦೦ ರಷ್ಟು ಫಲಿತಾಂಶವನ್ನು ಪ್ರತಿವರ್ಷ ಪಡೆಯುವಂತೆ ಮಕ್ಕಳಿಗೆ ಶುಭ ಹಾರೈಸಿದರು. ಕಂಪ್ಯೂಟರ್‌ಗಳ ಸದ್ಬಳಕೆ ಮಾಡಿಕೊಳ್ಳುವಂತೆ ವಿನಂತಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ಮೂಕೊಂಡ ಶಶಿ ಸುಬ್ರಮಣಿ ಮಾತನಾಡಿ, ಬೆಂಗಳೂರಿನ ಸ್ಪೋರ್ಟ್ಸ್ ಅವಿನ್ಯೂ ವತಿಯಿಂದ ಶಾಲೆಗೆ ಸುಮಾರು ರೂ. ೪೦,೦೦೦ಗಳ ಸ್ಪೋರ್ಟ್ಸ್ ಕಿಟ್ಟನ್ನು ನೀಡಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಶಾಲಾ ಮುಖ್ಯ ಶಿಕ್ಷಕ ಎಚ್.ಡಿ ಲೋಕೇಶ್ ಸ್ವಾಗತಿಸಿ, ಶಾಲಾ ಅಧ್ಯಾಪಕ ಸಂದೀಪ್ ವಂದಿಸಿದರು. ಅಧ್ಯಾಪಕಿ ಪ್ರಮೀಳಾ ಕುಮಾರಿ ವೈ ಕಾರ್ಯಕ್ರಮ ನಿರೂಪಿಸಿದರು.