ಪೊನ್ನಂಪೇಟೆ, ನ. ೨೧: ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡುತ್ತಿದ್ದ ಸಂದರ್ಭ ವೈಯಕ್ತಿಕ ಕಾರಣಕ್ಕೆ ಶುರುವಾದ ಮಾತಿನ ಚಕಮಕಿ, ಕೊನೆಗೆ ರಕ್ತಪಾತದಲ್ಲಿ ಅಂತ್ಯವಾಗಿದೆ.

ಘಟನೆಯಲ್ಲಿ ತೂಚಮಕೇರಿ ಗ್ರಾಮದ ಚಿಂಡಮಾಡ ದೀಪು ಎಂಬ ವ್ಯಕ್ತಿ ಚಾಕು ಇರಿತಕ್ಕೆ ಒಳಗಾಗಿದ್ದು, ಹಲ್ಲೆ ಮಾಡಿದವನನ್ನು ಹರಿಹರ ಗ್ರಾಮದ ಎಂ. ಕಾಳಪ್ಪ ಎಂದು ಗುರುತಿಸಲಾಗಿದೆ.

ಪೊನ್ನಂಪೇಟೆಯ ಬಾರ್‌ವೊಂದರಲ್ಲಿ ಸ್ನೇಹಿತರು ಒಟ್ಟಿಗೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ವೈಯಕ್ತಿಕ ವಿಚಾರಕ್ಕೆ ಸಂಬAಧಿಸಿದAತೆ ದೀಪು ಮತ್ತು ಕಾಳಪ್ಪ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿದೆ.

ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಕಾಳಪ್ಪ, ೪ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ತನ್ನ ಬಳಿ ಇದ್ದ ಚಾಕುವಿನಿಂದ ತನ್ನ ಸ್ನೇಹಿತ ದೀಪುಗೆ ಆರು ಬಾರಿ ಇರಿದಿದ್ದಾನೆ ಎನ್ನಲಾಗಿದೆ.

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ದೀಪು ಅವರನ್ನು ತಕ್ಷಣ ಸ್ಥಳೀಯರು ಗೋಣಿಕೊಪ್ಪ ಆಸ್ಪತ್ರೆಗೆ ಸಾಗಿಸಿದ್ದು ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಪೊನ್ನಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.