ಮಡಿಕೇರಿ, ನ.೨೧: ವೀರಾಜಪೇಟೆ ತಾಲೂಕಿನ ಅಮ್ಮತ್ತಿ ಹೋಬಳಿಯ ಕೊಂಡAಗೇರಿಯ ಶಾದಿ ಮಹಲ್‌ನಲ್ಲಿ ಹಾಗೂ ಕುಶಾಲನಗರ ತಾಲೂಕಿನ ಕೂಡಿಗೆ ಡಯಟ್ ಮೈದಾನದಲ್ಲಿ ನಡೆದ ಪ್ರಜಾಸೇವಾ ಅಭಿಯಾನದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರ ಸ್ವಾಮಿ ಅವರು ಶನಿವಾರ ಪಾಲ್ಗೊಂಡು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಕೊಂಡAಗೇರಿಯಲ್ಲಿ ಸುಮಾರು ೬೩ ಕ್ಕೂ ಹೆಚ್ಚು ಅರ್ಜಿಗಳು ಹಾಗೂ ಕುಶಾಲನಗರದ ಕೂಡಿಗೆಯಲ್ಲಿ ಸುಮಾರು ೪೬ ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾದವು. ಸಾರ್ವಜನಿಕರಿಂದ ಸ್ವೀಕರಿಸಿದ ಕೆಲವು ಅರ್ಜಿಗಳಲ್ಲಿನ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಸಚಿವರು ಬಗೆಹರಿಸಿದರು. ಪ್ರಜಾಸೇವಾ ಅಭಿಯಾನದ ಅರ್ಜಿಗಳು ಸಕಾಲ ವ್ಯಾಪ್ತಿಗೆ ಬರುವುದರಿಂದ ಸಾರ್ವಜನಿಕರ ಅಹವಾಲುಗಳನ್ನು ತ್ವರಿತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ನರೇಂದ್ರಸ್ವಾಮಿ ಸೂಚಿಸಿದರು. ಕಚೇರಿಗಳಲ್ಲಿ ಕೆಲಸ ಆಗಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರಬಾರದು.

ಜನರ ಬಳಿಗೆ ಸರ್ಕಾರದ ಆಡಳಿತ ವ್ಯವಸ್ಥೆ ತೆರಳಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಪರಿಹರಿಸುವುದು ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಲ್ಲಿ ಅಭಿಯಾನ ಸಹಕಾರಿಯಾಗಿದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತಾಗಬೇಕು ಎಂದರು.

ಕುಡಿಯುವ ನೀರು ಪೂರೈಕೆ, ರಸ್ತೆ ಮತ್ತು ಸೇತುವೆ ನಿರ್ಮಾಣ, ವಸತಿ ಯೋಜನೆ ಕಲ್ಪಿಸುವುದು ಹೀಗೆ ಹಲವು ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಹೆಚ್ಚಿನ ಅಹವಾಲು ಸಲ್ಲಿಸಿದರು. ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಸಿದ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ. ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಮಾಡುವುದು ಕಂಡುಬAದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.

ಸಾರ್ವಜನಿಕರು ವಿಧಾನಸೌಧ ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುತ್ತಿದ್ದರೂ ಸಕಾಲದಲ್ಲಿ ಕೆಲಸಗಳು ಆಗುತ್ತಿಲ್ಲ. ಇದನ್ನು ಗಮನಿಸಿ ಸರ್ಕಾರವೇ ಜನರ ಮನೆ ಬಾಗಿಲಿಗೆ ಬರುವ ಕಾರ್ಯಕ್ರಮ ರೂಪಿಸಿದೆ. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರ ಶಾಸಕರು ಮತ್ತು ಸಚಿವರ ನೇತೃತ್ವದಲ್ಲಿ ಅಭಿಯಾನ ನಡೆಯುತ್ತಿದೆ. ಇನ್ನು ಮುಂದೆ ಯಾವುದೇ ಸರ್ಕಾರಿ ಕಚೇರಿಗಳ ವಿರುದ್ಧ ದೂರುಗಳು ಬರಬಾರದು. ಅಧಿಕಾರಿಗಳು ಜಡತ್ವದಿಂದ ಹೊರಬಂದು ಜನಸೇವೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕರಿಂದ ಮೊದಲೇ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಿರುವ ದೂರುಗಳನ್ನು ವೇದಿಕೆಯಲ್ಲೇ ಇತ್ಯರ್ಥಪಡಿಸಲಾಗುವುದು. ಜಿಲ್ಲಾ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲೆಂದೇ ಆಡಳಿತವನ್ನು ಸರಳೀಕರಣಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದರು.

ರಾಜ್ಯ ಸರ್ಕಾರದಿಂದ ರೈತರ ಅನುಕೂಲಕ್ಕಾಗಿ ನೇಗಿಲ ಯೋಗಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಅದೇ ರೀತಿ ರೈತ ಚೈತನ್ಯ ಯೋಜನೆಯಲ್ಲಿ ಉಪಗ್ರಹ ಆಧಾರಿತ ತಂತ್ರಜ್ಞಾನ ಬಳಸಿ ಭೂಮಿಯ ಫಲವತ್ತತೆ, ಬೆಳೆ ಪರಿಸ್ಥಿತಿ ಹಾಗೂ ರೋಗಬಾಧೆಯ ಸಾಧ್ಯತೆಗಳನ್ನು ಮೊದಲೇ ಪತ್ತೆಹಚ್ಚಲಾಗುವುದು. ಇದರಿಂದ ಬೆಳೆಗೆ ಸಂಭವಿಸಬಹುದಾದ ರೋಗವನ್ನು ತಡೆಯಲು ಸಹಕಾರಿ ಆಗಲಿದೆ.

ರೈತ ಗುಂಪುಗಳು ತಮ್ಮ ಕೃಷಿ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡಲು ಮುಂದಾದರೆ ಅಂತಹವರಿಗೆ ಸರ್ಕಾರÀ ಅಗತ್ಯ ಪ್ರೋತ್ಸಾಹ ಮತ್ತು ನೆರವು ನೀಡಲು ಬದ್ಧವಾಗಿದೆ ಎಂದು ಸಚಿವರು ಘೋಷಿಸಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ೪ನಾಲ್ಕನೇ ಪುಟಕ್ಕೆ

(ಮೊದಲ ಪುಟದಿಂದ) ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ.ಮಂತರ್ ಗೌಡ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಾನ್ಸನ್ (ವೀರಾಜಪೇಟೆ), ವಿ.ಪಿ. ಶಶಿಧರ (ಕುಶಾಲನಗರ) ಕಾವೇರಿ ಜಲಾನಯನ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಸೂರಜ್ ಹೊಸೂರು, ವೀರಾಜಪೇಟೆ ತಾಲೂಕು ಕೆಡಿಪಿ ಸದಸ್ಯರಾದ ರಫಿಕ್, ಗಣೇಶ್, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಜಿ.ಪಂ. ಸಿಇಒ ದಿನೇಶ್ ಕುಮಾರ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷಿö್ಮ ರಾಯಕೋಡ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸೆಂಥಿಲ್ ಕುಮಾರ್, ತಹಶೀಲ್ದಾರರಾದ ಪ್ರವೀಣ್ ಕುಮಾರ್, ರಮೇಶ್ ಬಾಬು, ತಾ.ಪಂ. ಇಒ ರಾಜೇಶ್, ಅಪ್ಪಣ್ಣ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.