ಕೋವರ್‌ಕೊಲ್ಲಿ ಇಂದ್ರೇಶ್

ಬೆAಗಳೂರು, ನ. ೨೨: ರಾಜ್ಯದ ಕಾಂಗ್ರೆಸ್ ಸರ್ಕಾರ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಯಾವುದೇ ಸರ್ಕಾರ ನೀಡಿದ್ದಕ್ಕಿಂತಲೂ ಹೆಚ್ಚಿನ ಅನುದಾನ ಒದಗಿಸುತ್ತಿದೆ ಎಂದ ಉಪಮುಖ್ಯಮಂತ್ರಿ ಹಾಗೂ ಕ್ರೀಡೆ, ಕಂದಾಯ ಸಚಿವ ಜಿ. ಪರಮೇಶ್ವರ್ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ೭೨ ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಿದ್ದು, ಈ ಪೈಕಿ ೧,೫೦೦ ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಹಾಕಿ ಅಸೋಸಿಯೇಷನ್‌ನಲ್ಲಿ ನಡೆದ ಅಜ್ಜಿಕುಟ್ಟೀರ ಕೌಟುಂಬಿಕ ಕೊಡವ ಹಾಕಿ ಪಂದ್ಯಾವಳಿಯ ಲೋಗೊ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯೂ ಆಯಾ ಭಾಗದಲ್ಲಿ ಜನಪ್ರಿಯವಾಗಿರುವ ಕ್ರೀಡೆಗಳಿಗೆ ಪೂರಕವಾಗಿ ಸುಸಜ್ಜಿತ ಕ್ರೀಡಾಂಗಣಗಳನ್ನು ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ ಎಂದರು.

ಒಲಿAಪಿಕ್ಸ್, ಕಾಮನ್‌ವೆಲ್ತ್ ಹಾಗೂ ಅಂತರರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನೀಡಲಾಗುವ ಬಹುಮಾನದ ಮೊತ್ತವನ್ನು ೨೫ ಲಕ್ಷ ರೂ.ಗಳಿಂದ ಒಂದು ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ.೩ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಿದರು.

ಬೆಂಗಳೂರು ನಗರದ ನಾಲ್ಕು ದಿಕ್ಕುಗಳಲ್ಲಿಯೂ ತಲಾ ಒಂದರAತೆ ನಾಲ್ಕು ಸುಸಜ್ಜಿತ ವಿಶ್ವದರ್ಜೆಯ ಕ್ರೀಡಾಂಗಣ ಹಾಗೂ ಕಬ್ಬನ್ ಪಾರ್ಕ್ ಮಾದರಿಯ ಉದ್ಯಾನವನಗಳನ್ನು ನಿರ್ಮಿಸಲು ಸೂಕ್ತ ಸ್ಥಳ ಗುರುತಿಸುವಂತೆ ವೇದಿಕೆಯಲ್ಲಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಅವರಿಗೆ ಸೂಚಿಸಿದರು. ಈ ಯೋಜನೆಗಳ ಅನುಷ್ಠಾನಕ್ಕೆ ಎಷ್ಟೇ ಹಣ ವೆಚ್ಚವಾದರೂ ಸರ್ಕಾರ ಭರಿಸಲಿದೆ ಎಂದು ಭರವಸೆ ನೀಡಿದರು.

ಕೊಡವ ಜನಾಂಗ ತನ್ನ ಶ್ರೀಮಂತ ಹಾಗೂ ವಿಶಿಷ್ಟ ಸಂಸ್ಕೃತಿ, ಪ್ರತಿಭೆ ಮತ್ತು ಪರಂಪರೆಯ ಮೂಲಕ ದೇಶದ ಗಮನ ಸೆಳೆಯುತ್ತಿದೆ ಎಂದು ಶ್ಲಾಘಿಸಿದ ಅವರು, ಭಾರತ ಹಾಕಿ ಕ್ರೀಡೆಯಲ್ಲಿ ಈವರೆಗೆ ಎಂಟು ಒಲಿಂಪಿಕ್ ಪದಕಗಳನ್ನು ಗೆದ್ದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಯುವಜನರಲ್ಲಿ ಕ್ರೀಡೆಯ ಆಸಕ್ತಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದರು.

ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಉತ್ಸಾಹದಿಂದ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಕೊಡಗಿನ ಭವಿಷ್ಯದ ನಾಯಕ ಎಂದು ಬಣ್ಣಿಸಿದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಮಾತನಾಡಿ, ಕೊಡಗಿನ ಜನತೆ ಹಾಕಿ ಕ್ರೀಡೆಯ ಬಗ್ಗೆ ಹೊಂದಿರುವ ಪ್ರೀತಿ ಹಾಗೂ ಆಸಕ್ತಿ ವಿಶ್ವದ ಗಮನ ಸೆಳೆಯುತ್ತಿದೆ. ಕೊಡಗಿನ ಕನಿಷ್ಟ ೫೦ ಆಟಗಾರರು ಪ್ರತಿವರ್ಷ ಅಂತರರಾಷ್ಟಿçÃಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

ಶಾAತಿನಗರ ಶಾಸಕ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ. ಹ್ಯಾರಿಸ್ ಮಾತನಾಡಿ, ತಮ್ಮ ಸರ್ಕಾರ ಸೇರಿದಂತೆ ಯಾವುದೇ ಸರ್ಕಾರ ಕ್ರೀಡಾರಂಗಕ್ಕೆ ನಿರೀಕ್ಷಿತ ಪ್ರಮಾಣದ ಅನುದಾನ ನೀಡುತ್ತಿಲ್ಲ ಎಂಬ ಬೇಸರ ವ್ಯಕ್ತಪಡಿಸಿದರು. ಪ್ರತಿಯೊಂದು ಜಿಲ್ಲೆಯಲ್ಲಿಯೂ ಸುಸಜ್ಜಿತ ಕ್ರೀಡಾಂಗಣ ನಿರ್ಮಿಸುವ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಉದ್ದೇಶದಿಂದ ಕನಿಷ್ಟ ೫೦ ಎಕರೆ ಜಾಗವನ್ನು ಈಗಿನಿಂದಲೇ ಮೀಸಲಿಡಬೇಕು ಎಂದು ಕಂದಾಯ ಸಚಿವರನ್ನು ಒತ್ತಾಯಿಸಿದರು.

ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಮಾತನಾಡಿ, ಕೊಡಗಿನ ಕ್ರೀಡಾರಂಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಈಗಾಗಲೇ ೭೦ ಕೋಟಿ ರೂ. ಅನುದಾನ ನೀಡಿದೆ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಶಾಸಕ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಸಭೆಯನ್ನುದ್ದೇಶಿಸಿ ಮಾತನಾಡಿದರು.

ದೇಶವನ್ನು ಪ್ರತಿನಿಧಿಸಿದ ಹಿರಿಯ ಹಾಕಿ ಆಟಗಾರರಾದ ಮೊಳ್ಳೇರ ಪಿ. ಗಣೇಶ್, ಅಂಜಪರವAಡ ಸುಬ್ಬಯ್ಯ, ಮನೆಯಪಂಡ ಸೋಮಯ್ಯ, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಬಾಳೆಯಡ ಸುಬ್ರಮಣಿ, ಚೇನಂಡ ನಿಕಿನ್ ತಿಮ್ಮಯ್ಯ ಹಾಗೂ ಚೆಪ್ಪುಡಿರ ಪೂಣಚ್ಚ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕರ್ನಾಟಕ ಹಾಕಿ ಅಸೋಸಿಯೇಷನ್ ಅಧ್ಯಕ್ಷ ಸುನಿಲ್ ಕುಮಾರ್ ಗುಪ್ತ, ಪಾಂಡAಡ ಬೋಪಣ್ಣ, ಅಜ್ಜಿಕುಟ್ಟಿರ ಕುಟುಂಬದ ಅಧ್ಯಕ್ಷ ಸಜನ್ ಚಂಗಪ್ಪ ಹಾಗೂ ಹಾಕಿ ಪಂದ್ಯಾವಳಿ ಸಮಿತಿ ಅಧ್ಯಕ್ಷ ನರೇನ್ ಕಾರ್ಯಪ್ಪ ಉಪಸ್ಥಿತರಿದ್ದರು.

ಅಜ್ಜಿಕುಟ್ಟಿರ ಸುನಿತಾ ಮತ್ತು ಗಿರೀಶ್ ಕಾರ್ಯಕ್ರಮ ನಿರೂಪಿಸಿದರು. ಶಾಸಕ ಎ.ಎಸ್. ಪೊನ್ನಣ್ಣ ಸ್ವಾಗತಿಸಿದರು. ನರೇನ್ ಕಾರ್ಯಪ್ಪ ವಂದಿಸಿದರು.