ನಾಪೋಕ್ಲು, ನ. ೨೨: ಕೊಡಗು-ದಕ್ಷಿಣ ಕನ್ನಡ ಗಡಿ ಭಾಗದ ಪೆರಾಜೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ವಿನು ಎಂಬವರು ಚಲಾಯಿಸುತ್ತಿದ್ದ ಕಾರು ಸುಳ್ಯದಿಂದ ಗೋಣಿಕೊಪ್ಪ ಕಡೆಗೆ ತೆರಳುತ್ತಿದ್ದಾಗ, ಅರಂತೋಡು ಕಡೆಯಿಂದ ಸುಳ್ಯಕ್ಕೆ ತೆರಳುತ್ತಿದ್ದ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಆಟೋರಿಕ್ಷಾ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ತಕ್ಷಣ ಸುಳ್ಯದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಕಾರು ಮತ್ತು ಆಟೋರಿಕ್ಷಾ ಎರಡೂ ಜಖಂಗೊAಡಿವೆ.