ಮಡಿಕೇರಿ, ನ. ೧೯: ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳ ಸಹಕಾರ ಹಾಗೂ ಸಮನ್ವಯ ಅತ್ಯಗತ್ಯ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಹೇಳಿದರು.
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ಶಾಸಕರ ವಿಶೇಷ ಅನುದಾನದಡಿ ೫೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಕಾಮಗಾರಿಗೆ ಸಂಬAಧಿಸಿದ ಕಡತಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ಅಭಿವೃದ್ಧಿ ಕಾರ್ಯ ಸುಗಮವಾಗಿ ನಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ಸಹಕರಿಸಿರುವುದನ್ನು ಸ್ವಾಗತಿಸುತ್ತೇನೆ. ಇದೇ ರೀತಿಯ ಇಲಾಖೆಗಳ ನಡುವಿನ ಸಮನ್ವಯತೆ ಮುಂದುವರಿಯಬೇಕು ಎಂದರು. ಈಗಾಗಲೇ ಗ್ರಾಮಕ್ಕೆ ಒಂದು ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಹಂತ ಹಂತವಾಗಿ ಉಳಿದ ಅಭಿವೃದ್ಧಿ ಕಾರ್ಯಗಳಿಗೂ ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.ಇದೇ ಸಂದರ್ಭ ಗ್ರಾಮಸ್ಥರು ಮನೆಗಳ ದುರಸ್ತಿ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಂಬAಧಿಸಿದAತೆ ಶಾಸಕರಿಗೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಟೇಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಣಿ, ಪ್ರಮುಖರಾದ ಸುಕೂರ್, ಬಾಳಾಡಿ ಪ್ರತಾಪ್ ಕುಮಾರ್, ಸಂಪತ್, ಕುಂಡಚ್ಚಿರ ಮಂಜು, ಮಂಜುನಾಥ್ ಸೇರಿದಂತೆ ಪಕ್ಷದ ಮುಖಂಡರು, ಗ್ರಾಮಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.