ಸೋಮವಾರಪೇಟೆ,ನ.೨೨: ತೊರೆನೂರಿನಲ್ಲಿ ನಡೆದ ಬಿಜೆಪಿ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಮಾಜಿ ಸಚಿವ ಅಪ್ಪಚ್ಚು ರಂಜನ್ ಸಮ್ಮುಖದಲ್ಲಿ ಕಾಂಗ್ರೆಸ್ನ ಕೆಲ ಕಾರ್ಯಕರ್ತರು, ಮುಖಂಡರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು.
ತೊರೆನೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಬಿ. ಜಗದೀಶ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ. ವಸಂತ್, ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕುಶಾಲಪ್ಪ, ಕಾಂಗ್ರೆಸ್ ವಲಯ ಅಧ್ಯಕ್ಷ ತೋಟೇಶ್ ಮಣಜೂರು ಗ್ರಾಮದ ಶ್ರೀನಿವಾಸ್, ತೊರೆನೂರು ದಂಡಿಗಮ್ಮ ದೇವಾಲಯ ಸಮಿತಿಯ ಮಾಜಿ ಅಧ್ಯಕ್ಷ ಧರ್ಮಯ್ಯ, ತ್ರಿನೇಶ್ ಅವರುಗಳು ಭಾರತೀಯ ಜನತಾ ಪಾರ್ಟಿಯ ಧ್ವಜ ಹಿಡಿಯುವ ಮೂಲಕ ಬಿಜೆಪಿ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಬಿ.ಬಿ. ಭಾರತೀಶ್, ಮಂಡಲ ಅಧ್ಯಕ್ಷ ಗೌತಮ್ ಗೌಡ, ಪ್ರಮುಖರಾದ ಸೋಮೇಶ್, ಚಂದ್ರಶೇಖರ್ ಹೇರೂರು, ಶರತ್ಚಂದ್ರ, ಕೃಷ್ಣಪ್ಪ ಸೇರಿದಂತೆ ಇತರರು ಇದ್ದರು.